ಸೋಮವಾರ, ಫೆಬ್ರವರಿ 17, 2020
27 °C

ಗುರಿ ಇದ್ದರೆ ಸಾಧನೆ ಸುಲಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸೂಕ್ತ ಮಾರ್ಗ ದರ್ಶನದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯ’ ಎಂದು ಕೆಎಎಸ್ ಅಧಿಕಾರಿ ನಾಜಿಯಾ ಸುಲ್ತಾನಾ ತಿಳಿಸಿದರು.

ನಗರದ ವಿವೇಕ್ ಇನ್ಪೋಟೆಕ್ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಉಚಿತ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ‘ಜೀವನದಲ್ಲಿ ಗುರಿ ಇದ್ದರೆ ಸಾಧನೆ ಮಾಡಲು ಕಷ್ಟವಾಗುವುದಿಲ್ಲ. ಭವಿಷ್ಯದ ಕನಸು ಕಾಣುವ ಜತೆಗೆ ನನಸು ಮಾಡಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದರು.

‘ನಾನು ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡುತ್ತೇನೆ ಎಂದುಕೊಳ್ಳುವ ಬದಲು ನಾನು ಪರೀಕ್ಷೆಗಳನ್ನು ಯಶಸ್ವಿಯಾಗಿ ಮಾಡಬಲ್ಲೆ ಎಂದು ಕೊಳ್ಳುವುದು ಸೂಕ್ತ. ಹಾಗಾಗಿ ಸ್ಪರ್ಧಾರ್ಥಿಗಳಿಗೆ ಆತ್ಮವಿಶ್ವಾಸ ಇರಬೇಕೇ ಹೊರತು ಅತಿಯಾದ ಆತ್ಮವಿಶ್ವಾಸ ಒಳಿತಲ್ಲ’ ಎಂದು ಹೇಳಿದರು.

‘ನಾನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಉರ್ದು ಭಾಷೆಯಲ್ಲಿ ಪಡೆದೆ. ಬಿ.ಕಾಂ ಪದವಿಯನ್ನು ಮುಗಿಸಿದ ನಂತರ ಕೆಎಎಸ್ ಪರೀಕ್ಷೆಗೆ ಸಿದ್ಧತೆಯನ್ನು ನಡೆಸಿದೆ. ಕನ್ನಡದಲ್ಲೇ ಕೆಎಎಸ್ ಪರೀಕ್ಷೆ ಎದುರಿಸಿದೆ. ಸ್ಪರ್ಧಾರ್ಥಿಗಳು ಕೇವಲ ಓದುವುದು ಮಾತ್ರವೇ ಅಲ್ಲದೆ ಇತರೆ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು’ ಎಂದು ಸಲಹೆ ನೀಡಿದರು.

‘ಸಮಾಜಕ್ಕೆ ಸೇವೆ ಮಾಡುವ ಅವಕಾಶ ಸಿಕ್ಕಾಗ ಕೆಲಸ ಬಡವರಿಗೆ ಅನುಕೂಲವಾಗುವಂತಿರಬೇಕು. ಸಮಾಜದಲ್ಲಿ ಗೌರವ ಸಂಪಾದಿಸಲು ಸಾಧ್ಯ. ಹಿಂದೆ ಜಿಲ್ಲೆಯ ಜಿಲ್ಲಾಧಿಕಾರಿ ಡಿ.ಕೆ.ರವಿ ಇದಕ್ಕೆ ಸಾಕ್ಷಿ. ಅವರ ಪ್ರೇರಣೆಯಿಂದಲೇ ನಾನು ಕೆಎಎಸ್ ಅಧಿಕಾರಿಯಾಗಿದ್ದೇನೆ’ ಎಂದು ಹೇಳಿದರು.

ವಿವೇಕ್ ಇನ್ಫೋಟೆಕ್‌ ವ್ಯವಸ್ಥಾಪಕ ನಿರ್ದೇಶಕ ಎ.ಪ್ರಮೋದ್ ಕುಮಾರ್ ಮಾತನಾಡಿ, ‘ಹಿಂದೆ ನಡೆದ ಕೆಎಎಸ್ ಪರೀಕ್ಷೆಯಲ್ಲಿ ಜಿಲ್ಲೆಯ ೮ ಮಂದಿ ಆಯ್ಕೆಯಾಗಿದ್ದಾರೆ. ಇದೀಗ ನಡೆಯುತ್ತಿರುವ ಪರೀಕ್ಷೆಯಲ್ಲಿ ಕನಿಷ್ಟ ೧೫ ಮಂದಿಯಾದರೂ ಅಧಿಕಾರಿಗಳಾಗಿ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ ಸಂಸ್ಥೆಯಲ್ಲಿ ಉತ್ತಮ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ, ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಖೇಶ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು