ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲೋತ್ಪನ್ನ ಬೆಲೆ ಏರಿಕೆ

Last Updated 28 ನವೆಂಬರ್ 2020, 13:46 IST
ಅಕ್ಷರ ಗಾತ್ರ

ಕೋಲಾರ: ತೈಲೋತ್ಪನ್ನಗಳ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ ತಟ್ಟಲಾರಂಭಿಸಿದೆ.

ಜಿಲ್ಲೆಯಲ್ಲಿ ಶುಕ್ರವಾರ (ನ.27) ಪೆಟ್ರೋಲ್‌ ಬೆಲೆ ಲೀಟರ್‌ಗೆ ₹ 84.53 ಹಾಗೂ ಡೀಸೆಲ್ ಬೆಲೆ ₹ 76.09 ಇತ್ತು. ಹಿಂದಿನ ದಿನಕ್ಕೆ ಹೋಲಿಸಿದರೆ ಶನಿವಾರ ಪೆಟ್ರೋಲ್‌ ಬೆಲೆ ಲೀಟರ್‌ಗೆ 25 ಪೈಸೆ ಏರಿಕೆಯಾಗಿ ₹ 84.78ಕ್ಕೆ ತಲುಪಿತು. ಡೀಸೆಲ್ ದರ ಲೀಟರ್‌ಗೆ 29 ಪೈಸೆ ಹೆಚ್ಚಳವಾಗಿ ₹ 76.38ಕ್ಕೆ ತಲುಪಿತು.

ಆಗಸ್ಟ್‌ ತಿಂಗಳವರೆಗೂ ಸತತ ಏರಿಕೆ ಕಂಡಿದ್ದ ಪೆಟ್ರೋಲ್‌ ಮತ್ತು ಡೀಸೆಲ್ ದರವು ನಂತರದ ದಿನಗಳಲ್ಲಿ ಇಳಿಮುವಾಗಿತ್ತು. 2 ತಿಂಗಳ ಕಾಲ ತೈಲ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡಿರಲಿಲ್ಲ. ನ.20ರ ನಂತರ ಮತ್ತೆ ಪೆಟ್ರೋಲ್, ಡೀಸೆಲ್ ದರ ನಿತ್ಯ ಏರಿಕೆ ಕಾಣುತ್ತಿದೆ.

‘ತೈಲೋತ್ಪನ್ನಗಳ ಬೆಲೆ ಏರಿಕೆ ಇದೇ ರೀತಿ ಮುಂದುವರಿದರೆ ದಿನಬಳಕೆ ವಸ್ತುಗಳು ಹಾಗೂ ಸೇವೆಗಳ ದರವೂ ಹೆಚ್ಚಳವಾಗುತ್ತದೆ. ತೈಲೋತ್ಪನ್ನ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳವು ಜನಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸರ್ಕಾರ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT