ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: 13ಕ್ಕೆ ಫೋನ್‌–ಇನ್‌ ಕಾರ್ಯಕ್ರಮ

Last Updated 10 ಮೇ 2021, 14:18 IST
ಅಕ್ಷರ ಗಾತ್ರ

ಕೋಲಾರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಸಂಬಂಧ ಮಾರ್ಗದರ್ಶನ ನೀಡಲು ಹಾಗೂ ಪಠ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಮೇ 13ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಫೋನ್‌–ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಿಡಿಪಿಐ ಕೃಷ್ಣಮೂರ್ತಿ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಫೋನ್‌–ಇನ್ ಕಾರ್ಯಕ್ರಮ ನಡೆಯಲಿದೆ. ವಿಷಯವಾರು ಸಂಪನ್ಮೂಲ ವ್ಯಕ್ತಿಗಳ ಮೊಬೈಲ್‌ ಸಂಖ್ಯೆ ನೀಡಲಾಗಿದ್ದು, ವಿದ್ಯಾರ್ಥಿಗಳು ಗೊಂದಲವಿರುವ ವಿಷಯಗಳನ್ನು ಆಯಾ ಸಂಪನ್ಮೂಲ ವ್ಯಕ್ತಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಥಮ ಭಾಷೆ ಕನ್ನಡ-ಕ್ಕೆ ಸಂಬಂಧಪಟ್ಟಂತೆ ಸಂಪನ್ಮೂಲ ವ್ಯಕ್ತಿಯ ಮೊಬೈಲ್‌ ಸಂಖ್ಯೆ 9900399627 ಅಥವಾ 7892833928ನ್ನು ಸಂಪರ್ಕಿಸಬಹುದು. ದ್ವಿತೀಯ ಭಾಷೆ ಇಂಗ್ಲಿಷ್‌ಗೆ 9481586717 ಅಥವಾ 7019479428, ತೃತೀಯ ಭಾಷೆ ಹಿಂದಿಗೆ 9738014709 ಅಥವಾ 8694958149ಕ್ಕೆ ವಿದ್ಯಾರ್ಥಿಗಳು ಕರೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

ಗಣಿತ ವಿಷಯ ಸಂಬಂಧ 94497 22344 ಅಥವಾ 9741540051 ಮೊಬೈಲ್‌ ಸಂಖ್ಯೆಗೆ, ವಿಜ್ಞಾನ ವಿಷಯಕ್ಕೆ 9164395811 ಅಥವಾ 9964321098ಕ್ಕೆ, ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಪಟ್ಟಂತೆ 8197304709 ಅಥವಾ 9902537525ಕ್ಕೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

ಪರೀಕ್ಷೆ ಬರೆಯುವ ಸಂಬಂಧ ಹಾಗೂ ಪರೀಕ್ಷಾ ಪೂರ್ವ ಸಿದ್ಧತೆಗೆ ಸಂಬಂಧಪಟ್ಟಂತೆ ಇತರೆ ವಿಷಯಗಳ ಬಗ್ಗೆ ಗೊಂದಲ ಪರಿಹಾರಕ್ಕೆ 9448999345, 9449110205, 9448306218, 9740200181 ಅಥವಾ 9448491858 ಮೊಬೈಲ್‌ ಸಂಖ್ಯೆಗೆ ಕರೆ ಮಾಡಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT