ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ನಿವೃತ್ತ ಪತ್ರಿಕಾ ಛಾಯಾಗ್ರಾಹಕ ಜಿ.ಭಗವಾನ್‌ ನಿಧನ

Last Updated 22 ಸೆಪ್ಟೆಂಬರ್ 2021, 15:15 IST
ಅಕ್ಷರ ಗಾತ್ರ

ಕೋಲಾರ: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಬಳಗದ ನಿವೃತ್ತ ಪತ್ರಿಕಾ ಛಾಯಾಗ್ರಾಹಕ ಜಿ.ಭಗವಾನ್‌ (92) ಅವರು ನಗರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪರ ಸಹೋದರಿಯ ಪತಿಯಾದ ಭಗವಾನ್‌ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದವರು. ಪ್ರಜಾವಾಣಿ ಮತ್ತು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಯಲ್ಲಿ ಸುಮಾರು 25 ವರ್ಷ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದ ಅವರು ದೇಶ ವಿದೇಶದ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಭಗವಾನ್ ಅವರಿಗೆ ಪತ್ನಿ ಮತ್ತು 6 ಪುತ್ರಿಯರಿದ್ದಾರೆ. ದೊಡ್ಡಬಳ್ಳಾಪುರದಲ್ಲಿನ ಈಡಿಗ ಸಮಾಜದ ರುದ್ರಭೂಮಿಯಲ್ಲಿ ಗುರುವಾರ (ಸೆ.23) ಬೆಳಿಗ್ಗೆ 11ಕ್ಕೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT