ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು: ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ

Last Updated 5 ಮಾರ್ಚ್ 2021, 2:21 IST
ಅಕ್ಷರ ಗಾತ್ರ

ಮುಳಬಾಗಿಲು: ದೈಹಿಕ ಶಿಕ್ಷಣ ಶಿಕ್ಷಕರು ಸಿಪಾಯಿಗಳಿದ್ದಂತೆ. ಹಾಗಾಗಿ, ವಿದ್ಯಾರ್ಥಿಗಳನ್ನು ಪ್ರಪಂಚಕ್ಕೆ ಉತ್ತಮವಾಗಿ ಪರಿಚಯಿಸುವ ಕೆಲಸ ಮಾಡಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಗಿರಿಜೇಶ್ವರಿ ದೇವಿ ಹೇಳಿದರು.

ನಗರದ ಗುರು ಭವನದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ 2020-21ನೇ ಸಾಲಿನ ದೈಹಿಕ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಹಾಗೂ 6ನೇ ವರ್ಷದ ಸಮ್ಮೇಳನ ಉದ್ಫಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಶಿಕ್ಷಕರ ಸಹಕಾರ ಇದ್ದ ಕಾರಣದಿಂದ ಕೊರೊನಾ ಸಂಕಷ್ಟ ಎದುರಿಸಲು ಸಾಧ್ಯವಾಯಿತು. ಅಲ್ಲದೇ ಎಸ್ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಯಿತು ಎಂದರು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಇ. ಶ್ರೀನಿವಾಸಗೌಡ, ಸಿ. ರಾಮಚಂದ್ರಪ್ಪ ಮತ್ತು ಬಿ. ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ತಾಲ್ಲೂಕು ವೈದ್ಯಾಧಿಕಾರಿ ಡಾ.ವರ್ಣಶ್ರೀ, ಉದ್ಯಮಿ ವಿಕೋಟಿ ಪಿ.ವಿ. ಸತೀಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚೌಡಪ್ಪ, ತಾಲ್ಲೂಕು ಗೌರವಾಧ್ಯಕ್ಷ ಟಿ.ಆರ್. ಆನಂದ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವೆಂಕಟಗಿರಿಯಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT