ಗುರುವಾರ , ಮೇ 6, 2021
24 °C

ಉದ್ಯೋಗ: 23ಕ್ಕೆ ನೇರ ಸಂದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಪ್ರಜಾವಾಣಿ’ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಜಿಲ್ಲಾ ಕೇಂದ್ರದಲ್ಲಿ ಶುಕ್ರವಾರ (ಏ.23) ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕೇಂದ್ರದ ಅಂತರಗಂಗೆ ಬೆಟ್ಟದ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ 18 ವರ್ಷದಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಬರಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಶನಕ್ಕೆ ಹಾಜರಾಗುವವರು ವಿದ್ಯಾರ್ಹತೆ ಮತ್ತು ಸ್ವವಿವರದ ದಾಖಲೆಪತ್ರ, ಅಂಕಪಟ್ಟಿಗಳನ್ನು ತರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗೆ 6360609726, 9606931760, 9606931740 ಅಥವಾ 6360432904 ಮೊಬೈಲ್‌ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು