ಕೋಲಾರ: ಜಿಲ್ಲೆಯಲ್ಲಿ ಹದಿಹರೆಯದವರು ಪ್ರೇಮ ಪಾಶಕ್ಕೆ ಸಿಲುಕಿ, ದೈಹಿಕ ಆಕರ್ಷಣೆಗೆ ಒಳಗಾಗಿ ದಾರಿ ತಪ್ಪುತ್ತಿದ್ದು, ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎಂಟು ತಿಂಗಳಲ್ಲಿ 114 ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣ ದಾಖಲಾಗಿರುವುದು ಆತಂಕ ತಂದೊಡ್ಡಿದೆ.

ಸುಂದರ ಭವಿಷ್ಯ ಕಟ್ಟಿಕೊಳ್ಳುವ ಸಮಯದಲ್ಲೇ ಪ್ರೀತಿಯ ಆಕರ್ಷಣೆಗೆ ಒಳಗಾಗಿ ಓಡಿ ಹೋಗಿ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ, ನಂತರ ಪರಿತಪಿಸುತ್ತಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಶಾಲಾ ಕಾಲೇಜುಗಳಲ್ಲಿ ಅವಿರತವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯುತ್ತಿದ್ದರೂ ಹದಿಹರೆಯದ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳು ನಿಲ್ಲುತ್ತಿಲ್ಲ.

ಪ್ರೇಮ ಪ್ರಕರಣದಲ್ಲಿ ಸಿಲುಕಿಯೋ, ಬಾಲ್ಯ ವಿವಾಹದಿಂದಲೋ ಹಾಗೂ ಇನ್ನಿತರ ಕಾರಣಗಳಿಂದಲೂ ಬಾಲಕಿಯರು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಒಳಗಾಗುತ್ತಿರುವುದು ಗೊತ್ತಾಗುತ್ತಿದೆ. ಬಾಲಕಿಯರನ್ನು ಯುವಕರೋ, ಮತ್ಯಾರೋ ಪ್ರೀತಿಸಿ, ಲೈಂಗಿಕ ವಾಂಛೆಗೆ ಬಳಸಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರುವ, ಜೈಲು ಪಾಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.

ಪೋಕ್ಸೊ ಪ್ರಕರಣದಲ್ಲಿ ಸಿಲುಕಿದವರಿಗೆ ಸಾಕ್ಷ್ಯ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಶಿಕ್ಷೆಯಾಗುವ ಪ್ರಮಾಣ ಕಡಿಮೆ ಆಗುತ್ತಿದೆ. ತನಿಖೆಗೆ ಸಂತ್ರಸ್ತರು ಹಾಗೂ ಕುಟುಂಬದಿಂದ ಸಹಕಾರ ಸಿಗದಿರುವುದೂ, ಪ್ರಕರಣ ಮುಂದುವರಿಸಿಕೊಂಡು ಹೋಗಲು ಹಿಂಜರಿಯುವುದೂ ಆರೋಪಿಗಳು ಬಚಾವ್ ಆಗಲು ದಾರಿ ಮಾಡಿಕೊಡುತ್ತಿದೆ. ಅನೇಕರು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಮತ್ತು ರಾಜಿ ಮಾಡಿಕೊಳ್ಳಲು ಮುಂದಾಗುತ್ತಾರೆ. ಇದರಿಂದ ಪೋಕ್ಸೊ ಕಾಯ್ದೆ ಬಗ್ಗೆ ಭಯ ಇಲ್ಲದಂತಾಗಿದ್ದು, ಇಂಥ ಪ್ರಕರಣಗಳು ಹೆಚ್ಚಾಗಲು ಕಾರಣ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಕೆಲ ಪ್ರಕರಣಗಳಲ್ಲಿ ಆರೋಪಿಯು ಕುಟುಂಬದ ಸದಸ್ಯನೇ ಆಗಿರುತ್ತಾನೆ. ಅಂಥ ಸಂದರ್ಭಗಳಲ್ಲಿ ಕುಟುಂಬದ ಒತ್ತಡದಿಂದಾಗಿ ಪೋಷಕರು ಪ್ರಕರಣದಿಂದ ಹಿಂದೆ ಸರಿಯುತ್ತಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು 2012ರಲ್ಲಿ ಪೋಕ್ಸೊ ಕಾಯ್ದೆ ಜಾರಿ ಮಾಡಲಾಗಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ 20 ವರ್ಷದಿಂದ ಜೀವಾವಧಿ ಶಿಕ್ಷೆ ಮತ್ತು ದಂಡಕ್ಕೆ ಈ ಕಾಯ್ದೆಯಡಿ ಅವಕಾಶವಿದೆ.

ಜೈಲುಗಳಲ್ಲಿ ವಿಚಾರಣಾಧೀನ ಕೈದಿಗಳಲ್ಲಿ ಹೆಚ್ಚಿನವರು ಪೋಕ್ಸೊ ಕಾಯ್ದೆ ಪ್ರಕರಣದ ಆರೋಪ ಎದುರಿಸುತ್ತಿರುವವರೇ ಆಗಿದ್ದಾರೆ. ಕೋಲಾರ ಜಿಲ್ಲಾ ಕಾರಾಗೃಹದಲ್ಲಿ 165 ವಿಚಾರಣಾಧೀನ ಕೈದಿಗಳಿದ್ದು, ಶೇ 70ರಷ್ಟು ಮಂದಿ ಪೋಕ್ಸೊ ಪ್ರಕರಣದಲ್ಲಿ ಸಿಲುಕಿರುವವರೇ ಇದ್ದಾರೆ. ಅವರಲ್ಲಿ ಯುವಕರೇ ಹೆಚ್ಚಿದ್ದಾರೆ. ಕುರುಡು ಪ್ರೇಮಕ್ಕೆ ಸಿಲುಕಿ ದಾರಿ ತಪ್ಪುತ್ತಿದ್ದಾರೆ. ಅಪರಾಧ ಸಾಬೀತಾದರೆ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂಬ ವಿಚಾರ ಗೊತ್ತಿದ್ದರೂ ಇಂಥ ಕೃತ್ಯ ಎಸಗುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.