ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲಿ: 21ಕ್ಕೆ ಪೂಜಾ ಕಾರ್ಯಕ್ರಮ

Last Updated 17 ಫೆಬ್ರುವರಿ 2020, 14:55 IST
ಅಕ್ಷರ ಗಾತ್ರ

ಕೋಲಾರ: ‘ಮಹಾ ಶಿವರಾತ್ರಿ ಪ್ರಯುಕ್ತ ತಾಲ್ಲೂಕಿನ ಹೊಳಲಿ ಗ್ರಾಮದ ಭೀಮಲಿಂಗೇಶ್ವರಸ್ವಾಮಿ ದೇವಾಲಯದಲ್ಲಿ ಫೆ.21ರಿಂದ 24ರವರೆಗೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಭೀಮಲಿಂಗೇಶ್ವರಸ್ವಾಮಿ ದೇವಾಲಯದ ದತ್ತಾತ್ರೇಯ ಅವಧೂತ ಸ್ವಾಮೀಜಿ ತಿಳಿಸಿದರು.

ಹೊಳಲಿ ಗ್ರಾಮದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಫೆ.21ರಂದು ಪಂಚಾಮೃತ ಅಭಿಷೇಕದೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ಗಿರಿಜಾ, ಕಲ್ಯಾಣೋತ್ಸವ, ಉಯ್ಯಾಲೋತ್ಸವ ನಡೆಯಲಿದೆ’ ಎಂದು ಹೇಳಿದರು.

‘ಫೆ.22ರಂದು ಬ್ರಹ್ಮ ರಥೋತ್ಸವ, ದೇವರ ಮೆರವಣಿಗೆ ಮತ್ತು ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುತ್ತಾರೆ. ಉಚಿತ ಆಂಬುಲೆನ್ಸ್‌ ಸೇವೆಗೆ ಅದೇ ದಿನ ಚಾಲನೆ ನೀಡಲಾಗುತ್ತದೆ. ಅನ್ನ ಸಂತರ್ಪಣೆ, ಸಂಗೀತ ಮತ್ತು ಭರತ ನಾಟ್ಯ ಕಾರ್ಯಕ್ರಮ ನಡೆಯಲಿದೆ’ ಎಂದು ವಿವರಿಸಿದರು.

‘ಫೆ.23ರಂದು ಹಸಿ ಕರಗ, ಹೂವಿನ ಕರಗ ನಡೆಯಲಿದೆ. ಫೆ.24ರಂದು ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತವೆ. 4 ದಿನದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದು, ಜಿಲ್ಲಾಡಳಿತದ ಜತೆ ಚರ್ಚಿಸಲಾಗಿದೆ. ಪೊಲೀಸ್ ವ್ಯವಸ್ಥೆ, ಆರೋಗ್ಯ ಸೇವೆ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ’ ಎಂದರು.

‘ಜಿಲ್ಲೆಯಲ್ಲಿ ಸಾಮಾಜಿಕ ಸೇವೆ ನೀಡಲು ತೀರ್ಮಾನಿಸಲಾಗಿದ್ದು, ಹೊಳಲಿ ಗ್ರಾಮದಲ್ಲಿ ಗೋಶಾಲೆ ಆರಂಭಿಸಿ 100 ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯಿದೆ. ಪೂಜಾ ಕಾರ್ಯ ಸ್ಥಗಿತಗೊಂಡಿರುವ ದೇವಾಲಯಗಳಿಗೆ ಅರ್ಚಕರನ್ನು ನೇಮಿಸಿ ಪೂಜಾ ಕಾರ್ಯ ನಡೆಸುತ್ತೇವೆ’ ಎಂದು ಮಾಹಿತಿ ನೀಡಿದರು.

‘ಹೊಳಲಿ ಶಾಲೆಯ 70 ಮಕ್ಕಳಿಗೆ ವೇದಾಭ್ಯಾಸ ಮಾಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮತಾಂತರಿಗಳಿಂದ ಅನೇಕರು ತೊಂದರೆಗೆ ಒಳಗಾಗಿರುವ ಮಾಹಿತಿಯಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಸೇರಿಸಿ ಬಹಿರಂಗ ಸಭೆ ನಡೆಸುತ್ತೇವೆ. ಕೃಷಿ ಮತ್ತು ಉದ್ಯೋಗ ಮೇಳ ಸಹ ನಡೆಸುತ್ತೇವೆ’ ಎಂದು ತಿಳಿಸಿದರು.

ಪ್ರವಾಸಿ ತಾಣ: ‘ಹೊಳಲಿ ಕ್ಷೇತ್ರವನ್ನು ಪ್ರವಾಸಿ ತಾಣ ಮಾಡಬೇಕು. ಕ್ಷೇತ್ರ ಹೆಚ್ಚು ಅಭಿವೃದ್ಧಿಯಾಗುತ್ತಿದ್ದು, ಗ್ರಾಮಕ್ಕೆ ಬಸ್ ಸೌಲಭ್ಯ ಹೆಚ್ಚಿಸಲು ಸ್ವಾಮೀಜಿಯು ಅಧಿಕಾರಿಗಳ ಜತೆ ಚರ್ಚಿಸಬೇಕು’ ಎಂದು ಹೊಳಲಿ ಗ್ರಾಮಸ್ಥ ಶಾಂತಾರಾಮ್‌ ಮನವಿ ಮಾಡಿದರು.

ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಸಮಾಜ ಸೇವಕರಾದ ಶಂಕರನಾರಾಯಣ, ಎಸ್.ಸಿ.ವೆಂಕಟಕೃಷ್ಣಪ್ಪ, ಹೊಳಲಿ ಗ್ರಾಮ ಪಂಚಾಯಿತಿ ಸದಸ್ಯ ಚಲಪತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT