ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ | ಕ್ರೀಡಾಂಗಣದಲ್ಲಿ ಕಳಪೆ ಕಾಮಗಾರಿ: ಅಸಮಾಧಾನ

Published 28 ಜೂನ್ 2024, 14:07 IST
Last Updated 28 ಜೂನ್ 2024, 14:07 IST
ಅಕ್ಷರ ಗಾತ್ರ

ಕೋಲಾರ: ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿಂಥೆಟಿಕ್ ಕಾಮಗಾರಿಗಳು ಕಳಪೆಯಿಂದ ಕೂಡಿದೆ ಎಂದು ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಷನ್ ರಾಜ್ಯ ಕಾರ್ಯದರ್ಶಿ ರಾಜವೇಲು ಅಸಮಾಧಾನ ವ್ಯಕ್ತಪಡಿಸಿದರು.

ಕ್ರೀಡಾಂಗಣಕ್ಕೆ ಗುರುವಾರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್‍ನ ಪದಾಧಿಕಾರಿಗಳು ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಕ್ರೀಡಾಂಗಣ ನಿರ್ಮಾಣಕ್ಕೆ ಅಂದಾಜು ₹ 7 ಕೋಟಿ ಅನುದಾನ ಮಂಜೂರಾಗಿದ್ದು, ಸ್ಥಿತಿಗತಿಗಳನ್ನು ವೀಕ್ಷಿಸಿದರು. 2023ರ ಗಣರಾಜ್ಯೋತ್ಸವ ದಿನದಂದು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು, ಒಂದೂವರೆ ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವರು ಕ್ರೀಡಾಂಗಣದ ಕಾಮಗಾರಿಗಳ ಕಡೆ ಗಮನ ಹರಿಸಿ, ತಪ್ಪುಗಳಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರ ಮೇಲೆ ಒತ್ತಡ ಹಾಕಬೇಕೆಂದು ಒತ್ತಾಯಿಸಿದರು.

ಕ್ರೀಡಾಂಗಣದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸದೆ ತರಾತುರಿಯಲ್ಲಿ ಉದ್ಘಾಟನೆ ಮಾಡಿದರೆ ಪ್ರತಿಭಟನೆ ಮಾಡುವುದಾಗಿ ಪದಾಧಿಕಾರಿಗಳು ಎಚ್ಚರಿಸಿದರು.

ಜಿಲ್ಲಾ ಅಥ್ಲೆಟಿಕ್‌ ಅಸೋಸಿಯೇಷನ್ ಅಧ್ಯಕ್ಷ ಎನ್.ಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ, ಹಿರಿಯ ಕ್ರೀಡಾಪಟು ಎಚ್.ಜಗನ್ನಾಥನ್, ಉಪಾಧ್ಯಕ್ಷ ಗೌಸ್ ಖಾನ್, ಕಾರ್ಯದರ್ಶಿ ರಾಜೇಶ್ ಬಾಬು, ಸದಸ್ಯ ನಾಗೇಶ್, ಜಿಲ್ಲಾ ಕೋಚ್ ಎಂ.ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT