ಬುಧವಾರ, ಆಗಸ್ಟ್ 4, 2021
27 °C

ಜನಸಂಖ್ಯೆ ನಿಯಂತ್ರಣ: ಉತ್ತಮ ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಜನಸಂಖ್ಯೆ ನಿಯಂತ್ರಣ ವಿಚಾರವಾಗಿ ಉತ್ತರ ಪ್ರದೇಶದಲ್ಲಿ ಉತ್ತಮ ತೀರ್ಮಾನ ತೆಗೆದುಕೊಂಡಿದ್ದಾರೆ. ಕರ್ನಾಟಕದಲ್ಲೂ ಅದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜನಸಂಖ್ಯೆ ನಿಯಂತ್ರಣವು ಯಾವುದೋ ಒಂದು ಸಮುದಾಯಕ್ಕೆ ಸೀಮಿತವಲ್ಲ. ಇದರಲ್ಲಿ ಜಾತಿ, ಮತ, ಪಂಥವಿಲ್ಲ. ರಾಜ್ಯದ, ರಾಷ್ಟ್ರದ ಎಲ್ಲಾ ವರ್ಗಕ್ಕೂ ಸಮಾನ ನ್ಯಾಯ ಸಿಗಲಿದೆ. ಶಾಸಕ ಜಮೀರ್ ಅಹಮ್ಮದ್ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡ್ತಾರೆ. ಅವರು ಮತೀಯವಾದಿ’ ಎಂದು ಟೀಕಿಸಿದರು.

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಶ್ವಕ್ಕೆ ಮಾದರಿಯಾಗಿ ಕೋವಿಡ್‌ ನಿಯಂತ್ರಿಸಿದೆ. ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರದಲ್ಲಿ ಮನಮೋಹನ್‌ ಸಿಂಗ್‌ ಹಾಗೂ ರಾಜ್ಯದಲ್ಲಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಜಾತಿ, ಮತದ ಆಧಾರದಲ್ಲಿ ಲಸಿಕೆ ನೀಡುತ್ತಿದ್ದರು’ ಎಂದು ಕುಟುಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು