ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರದಾ ಪರಮೇಶ್ವರಿ ರಥೋತ್ಸವ

ಹೆಬ್ಬಸೂರು ಗ್ರಾಮದಲ್ಲಿ ಮನೆಮಾಡಿದ ಸಂಭ್ರಮ
Last Updated 28 ಏಪ್ರಿಲ್ 2018, 7:30 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಹೆಬ್ಬಸೂರು ಗ್ರಾಮದಲ್ಲಿ ಶುಕ್ರವಾರ ಶೃಂಗೇರಿ ಶಂಕರಮಠದ 12ನೇ ವಾರ್ಷಿಕೋತ್ಸವ ನಿಮಿತ್ತ ಶಾರದಾ ಪರಮೇಶ್ವರಿ ಮಹಾರಥೋತ್ಸವ ಸಂಭ್ರಮದಿಂದ ನಡೆಯಿತು.

ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಅವರ ಅನುಮತಿಯ ಮೇರೆಗೆ ಬೆಳಿಗ್ಗೆ 10ಗಂಟೆಗೆ ಶಾರದಾಂಬಾ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂಡ್ರಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಮಧ್ಯಾಹ್ನ 12.30ಕ್ಕೆ ರಥ ಸ್ವಸ್ಥಾನ ಸೇರಿತು. ರಥೋತ್ಸವ ಸಾಗುವ ಬೀದಿಗಳಲ್ಲಿನ ಪ್ರತಿ ಮನೆಯ ಮುಂಭಾಗದಲ್ಲಿ ರಂಗೋಲಿ ಹಾಕಿ ಅಲಂಕರಿಸಲಾಗಿತ್ತು.

ಭಕ್ತರು ಶಾರದಾ ಪರಮೇಶ್ವರಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಪಾನಕ, ಮಜ್ಜಿಗೆ ವಿತರಿಸಲಾಯಿತು. ಶಂಕರ ಮಠದ ಧರ್ಮಾಧಿಕಾರಿ ಎಚ್.ಎಸ್.ಶ್ರೀಧರ್ ಪ್ರಸಾದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT