ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿಯಲ್ಲಿ ಪ್ರಾರ್ಥನೆ: 11 ಮಂದಿ ವಶಕ್ಕೆ

Last Updated 30 ಏಪ್ರಿಲ್ 2020, 15:07 IST
ಅಕ್ಷರ ಗಾತ್ರ

ಕೋಲಾರ: ನಗರದ ದೊಡ್ಡಪೇಟೆ ಮಾರುಕಟ್ಟೆ ಸಮೀಪದ ಭಾ–ಕೀ ಮಸೀದಿಯಲ್ಲಿ ಲಾಕ್‌ಡೌನ್‌ ನಡುವೆಯೂ ಮುಸ್ಲಿಮರು ಗುರುವಾರ ಪ್ರಾರ್ಥನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಶೋಭಿತಾ ಅವರು ಮಸೀದಿಗೆ ದಿಢೀರ್‌ ಭೇಟಿ ಕೊಟ್ಟು 11 ಮಂದಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದರು.

ಭಾ–ಕೀ ಮಸೀದಿಯಲ್ಲಿ ಸಂಜೆ 11 ಮಂದಿ ಮುಸ್ಲಿಮರು ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ತಹಶೀಲ್ದಾರ್‌ ಪೊಲೀಸರೊಂದಿಗೆ ಮಸೀದಿಗೆ ಬಂದು ಪರಿಶೀಲನೆ ನಡೆಸಿದರು.

‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಯಾವುದೇ ಧಾರ್ಮಿಕ ಸಭೆ ಸಮಾರಂಭ, ಪ್ರಾರ್ಥನೆ ನಡೆಸುವಂತಿಲ್ಲ. ಜತೆಗೆ ಸರ್ಕಾರವು ಧಾರ್ಮಿಕ ಕೇಂದ್ರಗಳಿಗೆ ಕೆಲ ನಿಬಂಧನೆ ವಿಧಿಸಿದೆ. ಆದರೂ 11 ಮಂದಿ ಸರ್ಕಾರದ ಆದೇಶ ಉಲ್ಲಂಘಿಸಿ ಮಸೀದಿಯಲ್ಲಿ ಒಂದೆಡೆ ಸೇರಿ ಪ್ರಾರ್ಥನೆ ಮಾಡುತ್ತಿದ್ದರು’ ಎಂದು ಶೋಭಿತಾ ಸುದ್ದಿಗಾರರಿಗೆ ತಿಳಿಸಿದರು.

‘11 ಮಂದಿ ವಿರುದ್ಧ ಪ್ರಕರಣ ದಾಖಲಿಸಿ, ನಗರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಘಟನೆ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮಾಹಿತಿ ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT