ಶನಿವಾರ, ಮೇ 21, 2022
25 °C

ಮೂಲ ಸೌಕರ್ಯಕ್ಕೆ ಆದ್ಯತೆ- ಶಾಸಕ ಕೆ.ಆರ್. ರಮೇಶ್ ಕುಮಾರ್ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ಯಾವುದೇ ಗ್ರಾಮ ಸೌಲಭ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಲಾಗಿದೆ ಎಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದರು.

ತಾಲ್ಲೂಕಿನ ಮಂಚಿನೀಳ್ಳುಕೋಟ ಗ್ರಾಮದಲ್ಲಿ ಗುರುವಾರ ₹ 13.27 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಂಜೀವಿನಿ ಶೆಡ್, ₹ 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಮುದಾಯ ಭವನ, ₹ 10 ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯ ಗುಣಮಟ್ಟ ಕೆಡದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

ಕ್ಷೇತ್ರದಲ್ಲಿ ಈವರೆಗೆ 120 ಕೆರೆಗಳಿಗೆ ಕೆ.ಸಿ ವ್ಯಾಲಿ ನೀರು ಹರಿಸಲಾಗಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ತಾಲ್ಲೂಕಿನ ರಾಯಲ್ಪಾಡ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್‌ನಿಂದ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ನೀಡಲಾಗುವ ಬಡ್ಡಿರಹಿತ ಸಾಲದ ಮೊತ್ತವನ್ನು ₹ 50 ಸಾವಿರದಿಂದ ₹ 1 ಲಕ್ಷಕ್ಕೆ ಹೆಚ್ಚಿಸಲಾಗುವುದು. ರೈತರಿಗೆ ನೀಡುವ ಸಾಲದ ಮೊತ್ತವನ್ನು ₹ 5 ಲಕ್ಷಕ್ಕೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಯಾರೇ ಆಗಲಿ ಸಮಾಜದ ಸಾಮರಸ್ಯ ಕದಡುವ ಕೆಲಸಕ್ಕೆ ಕೈಹಾಕ ಬಾರದು. ಶಾಂತಿ, ಸಹಬಾಳ್ವೆಯಿಂದ ಮಾತ್ರ ನೆಮ್ಮದಿ ಸಾಧ್ಯ. ಪೊಲೀಸ್ ಠಾಣೆ, ನ್ಯಾಯಾಲಯಗಳಿಗೆ ಸುತ್ತಾಡುವಂತಹ ಯಾವುದೇ ಕೆಲಸವನ್ನು ಮಾಡಬಾರದು. ಬದಲಾದ ಪರಿಸ್ಥಿತಿಯಲ್ಲಿ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಪರಿಸ್ಥಿತಿ ಹಾಗಿರುವಾಗ ಅನಗತ್ಯ ಚಟುವಟಿಕೆ ಗಳಿಂದ ದೂರವಿರಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್. ಆನಂದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌತಮಿ ಮುನಿರಾಜು, ಸದಸ್ಯೆ ಕೆ.ಎನ್. ರಾಧಮ್ಮ, ಮುಖಂಡರಾದ ದಿಂಬಾಲ ಅಶೋಕ್, ಸಂಜಯ್‌ ರೆಡ್ಡಿ, ಕೊಂಡಸಂದ್ರ ಶಿವಾರೆಡ್ಡಿ, ಕೆ.ಕೆ. ಮಂಜು, ಶ್ರೀನಿವಾಸರೆಡ್ಡಿ, ಇ.ಆರ್. ನಾಗೇಂದ್ರಪ್ರಸಾದ್, ನಾಗರಾಜ್ ಇದ್ದರು. ತಾಲ್ಲೂಕಿನ ಜೋಡಿಕೊತ್ತಪಲ್ಲಿ ಗ್ರಾಮದಲ್ಲಿ ₹ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ ಹಾಗೂ ಅಂಬೇಡ್ಕರ್ ಭವನವನ್ನು ಶಾಸಕ ರಮೇಶ್ ಕುಮಾರ್ ಉದ್ಘಾಟಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.