ಶ್ರೀನಿವಾಸಪುರ: ಗುರುಭವನ ನಿರ್ಮಾಣಕ್ಕೆ ಆದ್ಯತೆ

ಶ್ರೀನಿವಾಸಪುರ: ತಾಲ್ಲೂಕು ಕೇಂದ್ರದಲ್ಲಿ ಗುರುಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಈ ಕಾರ್ಯಕ್ಕೆ ಶಿಕ್ಷಕರು ಸಹಕರಿಸಬೇಕು ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ವಿ.ರವಿಕುಮಾರ್
ಹೇಳಿದರು.
ತಾಲ್ಲೂಕಿನ ಮರಸನಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದರು.
ಶಿಕ್ಷಕರ ಸಮಸ್ಯೆಗಳ ನಿವಾರಣೆಗಾಗಿ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗೆ ಶಿಕ್ಷಕ ಮಿತ್ರರೊಬ್ಬರನ್ನು ನೇಮಿಸಲಾಗುವುದು ಎಂದು ಹೇಳಿದರು.
ಕೊರೊನಾ ಸಂಕಷ್ಟದ ನಡುವೆ ಶಿಕ್ಷಕರು ಇಲಾಖೆಯ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ನಿಯಮಾನುಸಾರ ಜಾರಿಗೆ ತರಬೇಕು. ಕಲಿಕೆ ಕುಂಠಿತಗೊಳ್ಳದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಂಘದ ಜಿಲ್ಲಾ ಘಟಕದ ಖಜಾಂಚಿ ಆರ್.ಎಸ್.ರೆಡ್ಡಪ್ಪ, ತಾಲ್ಲೂಕು ಘಟಕದ ಉಪಾಧ್ಯಕ್ಷ ಬಯ್ಯಾರೆಡ್ಡಿ, ಎಚ್.ವಿ.ಶೋಭಾ, ಪ್ರಧಾನ ಕಾರ್ಯದರ್ಶಿ ಸಿ.ವಿ.ಶಿವಣ್ಣ, ಖಜಾಂಚಿ ಎನ್.ವಿ.ವೇಣುಗೋಪಾಲ್, ಸಹ ಕಾರ್ಯದರ್ಶಿ ಎಲ್.ಶ್ರೀರಾಮ್, ಸಂಘಟನಾ ಕಾರ್ಯದರ್ಶಿ ಜಿ.ವಿ.ಚನ್ನಪ್ಪ, ಎನ್.ಮಾಧವಿ, ನಿರ್ದೇಶಕ ಟಿ.ಎಲ್.ದಿವಾಕರ್, ಕೆ.ವಿ.ನರಸಮ್ಮ, ಎಲ್.ಆನಂದ್, ಕೆ.ರಘುನಾಥ ರೆಡ್ಡಿ, ಡಿ.ವಿ.ವೆಂಕಟರಾಮ ರೆಡ್ಡಿ, ಎಸ್.ಮಂಜುನಾಥ್, ಟಿ.ಎಸ್.ಅನಿತಾ ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.