ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಜಯಂತಿಗೆ ಸಿದ್ಧತೆ

ಭವನ ನಿರ್ಮಾಣಕ್ಕೆ ಕ್ರಮ: ಶಾಸಕ ಎಸ್.ಎನ್. ನಾರಾಯಣಸ್ವಾಮಿ
Last Updated 1 ಏಪ್ರಿಲ್ 2022, 6:18 IST
ಅಕ್ಷರ ಗಾತ್ರ

ಬಂಗಾರಪೇಟೆ: ಮುಖಂಡರ ಅಭಿಪ್ರಾಯದಂತೆ ಜಿಲ್ಲೆಯಲ್ಲಿಯೇ ಮಾದರಿಯಾಗಿ ಅಂಬೇಡ್ಕರ್ ಜಯಂತಿ ಆಚರಿಸಲಾಗುವುದು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಎರಡು ವರ್ಷದಿಂದ ಕೊರೊನಾದಿಂದಾಗಿ ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ ರಾಂ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.

ಮೆರವಣಿಗೆಯಲ್ಲಿ 200ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ಜತೆಗೆ 10 ರಿಂದ 15 ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಲಿವೆ. ಇಲಾಖೆಗಳು ಹೊರತುಪಡಿಸಿ ಮೆರವಣಿಗೆಯಲ್ಲಿ ಭಾಗವಹಿಸುವ ಸಂಘ, ಸಂಸ್ಥೆ ಸ್ತಬ್ಧಚಿತ್ರಗಳಿಗೆ ₹ 10 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು.

ಜತೆಗೆ ಕೋಸಂಬರಿ, ಪಾನಕ, ಮಜ್ಜಿಗೆ ಸೇರಿದಂತೆ ಮೆರವಣಿಗೆಯಲ್ಲಿ ಭಾಗವಹಿಸುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ದೇಶಕ್ಕೆ ಸಂವಿಧಾನ ನೀಡಿದ ಮಹಾಶಿಲ್ಪಿಯ ಜಯಂತಿ ಆಚರಿಸಲು ಎಲ್ಲಾ ಸಂಘ– ಸಂಸ್ಥೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಕೇಂದ್ರಗಳಲ್ಲಿ ಅಂಬೇಡ್ಕರ್ ಭವನವನ್ನು ದೊಡ್ಡದಾಗಿ ನಿರ್ಮಿಸಬೇಕು ಎನ್ನುವ ಕಾರಣಕ್ಕಾಗಿ 2019-20ನೇ ಸಾಲಿನಲ್ಲಿ ಸರ್ಕಾರ ₹ 2 ಕೋಟಿ ಬಿಡುಗಡೆಗೆ ಆದೇಶ ಮಾಡಿದೆ ಎಂದರು.

ಹಲವು ವರ್ಷದ ಹಿಂದೆಯೇ ಅಂಬೇಡ್ಕರ್ ಭವನಕ್ಕೆ ನಿವೇಶನ ಮಂಜೂರು ಮಾಡಿದ್ದು, ಅದು ತೋಟಗಾರಿಕೆ ಇಲಾಖೆ ವಶದಲ್ಲಿತ್ತು. ಬಳಿಕ 2017ರಲ್ಲಿ 58,158 ಚದರ ಅಡಿಯಷ್ಟು ಜಾಗವನ್ನು ಸಮಾಜ ಕಲ್ಯಾಣ ಇಲಾಖೆಗೆ ವರ್ಗಾಯಿಸಿ, ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ಎಂ. ದಯಾನಂದ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎನ್. ವೆಂಕಟೇಶಪ್ಪ, ಪುರಸಭೆ ಅಧ್ಯಕ್ಷ ಫರ್ಜಾನಾ ಸುಹೇಲ್, ನೌಕರರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ, ಸರ್ಕಲ್ ಇನ್‌ಸ್ಪೆಕ್ಟರ್ ಸುನೀಲ್‌ ಕುಮಾರ್, ಮುಖಂಡ ನಾರಾಯಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT