ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಸಂಪರ್ಕ: 3 ಮಂದಿಗೆ ಸೋಂಕು

Last Updated 13 ಜೂನ್ 2020, 9:42 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 14ಕ್ಕೇರಿದೆ.

ಶ್ರೀನಿವಾಸಪುರದಲ್ಲಿ ಬುಧವಾರ (ಜೂನ್‌ 10) ಪತ್ತೆಯಾಗಿದ್ದ ಸೋಂಕಿತ ಪಾತ್ರೆ ವ್ಯಾಪಾರಿಯ (ಸೋಂಕಿತರ ಸಂಖ್ಯೆ–6171) ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಅವರ 17 ವರ್ಷದ ಮಗಳು, 70 ವರ್ಷದ ತಂದೆ ಹಾಗೂ 60 ವರ್ಷದ ತಾಯಿಗೆ ಸೋಂಕು ತಗುಲಿದೆ.

ಶ್ರೀನಿವಾಸಪುರದ ಅಂಚೆ ಕಚೇರಿ ರಸ್ತೆಯಲ್ಲಿ ಸೋಂಕಿತ ವ್ಯಾಪಾರಿಯ ಪಾತ್ರೆ ಮತ್ತು ಕಾಫಿ ಪುಡಿ ಅಂಗಡಿಯಿದೆ. ಪಾತ್ರೆ ಖರೀದಿಗಾಗಿ ತಮಿಳುನಾಡಿನ ಚೆನ್ನೈಗೆ ಹೋಗಿದ್ದ ಇವರಿಗೆ ಅಲ್ಲಿಯೇ ಸೋಂಕು ತಗುಲಿತ್ತು. ಚೆನ್ನೈನಿಂದ ಹಿಂದಿರುಗಿದ ನಂತರ ಸೋಂಕು ದೃಢಪಟ್ಟಿದ್ದರಿಂದ ಇವರನ್ನು ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆ ವೇಳೆಗಾಗಲೇ ಕುಟುಂಬ ಸದಸ್ಯರು ಇವರ ಸಂಪರ್ಕಕ್ಕೆ ಬಂದಿದ್ದರು.

ಹೀಗಾಗಿ ಕುಟುಂಬ ಸದಸ್ಯರೆಲ್ಲರನ್ನು ಕ್ವಾರಂಟೈನ್ ಮಾಡಲಾಗಿತ್ತು. ಜತೆಗೆ ಅವರೆಲ್ಲರ ಕಫಾ ಮತ್ತು ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶುಕ್ರವಾರ ರಾತ್ರಿ ಬಂದ ಪ್ರಯೋಗಾಲಯ ವರದಿಯಲ್ಲಿ ಕುಟುಂಬದ 3 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಮೂವರನ್ನು ಎಸ್‌ಎನ್‌ಆರ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT