ಬುಧವಾರ, ಮಾರ್ಚ್ 29, 2023
32 °C

ಮುಳಬಾಗಿಲು: ‘ಪ್ರವಾಸೋದ್ಯಮಕ್ಕೆ ಆದ್ಯತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ಜಿಲ್ಲೆಯಲ್ಲಿ ಹಲವು ಪುರಾಣ ಪ್ರಸಿದ್ಧ ದೇವಾಲಯಗಳಿವೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ಅಭಿವೃದ್ಧಿ ಪಡಿಸಲು ಸಚಿವ ಸಿ.ಟಿ. ರವಿ ಅವರೊಂದಿಗೆ ಶ್ರಮಿಸುತ್ತೇನೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ನುಡಿದರು.

ನಗರದಲ್ಲಿ ಸುಗಮ ಸಂಚಾರಕ್ಕೆ ಕೈಗೊಳ್ಳುತ್ತಿರುವ ಕ್ರಮಗಳನ್ನು ಪರಿಶೀಲಿಸಿದರು. ಸಂಚಾರ ಸಮಸ್ಯೆಗಳನ್ನು ವೈಜ್ಞಾನಿಕ ವಿಧಾನದಲ್ಲಿ ಪರಿಹರಿಸಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ‘ಮುಳಬಾಗಿಲಿನಲ್ಲಿ ಡಿವಿಜಿ ಹುಟ್ಟಿದ ಶಾಲೆ ಅಭಿವೃದ್ಧಿಗೊಳಿಸಲಾಗುವುದು. ಅವರ ಸ್ಮರಣಾರ್ಥ ವಿಗ್ರಹ ಸ್ಥಾಪಿಸಲಾಗುವುದು. ಆಯುಷ್ಮಾನ್ ಭಾರತ ಯೋಜನೆ ಜಾರಿಗೆ ತರಲು ಮುಂದಿನ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಮೇಲೆ ಒತ್ತಡ ಹೇರಲಾಗುವುದು’ ಎಂದರು.

ತಾಲ್ಲೂಕು ದರಖಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ತಹಶೀಲ್ದಾರ್ ರಾಜಶೇಖರ್, ತಾಲ್ಲೂಕು ಪಂಚಾಯಿತಿ ಅಧಿಕಾರಿ ಎಂ.ಬಾಬು, ಸರ್ಕಲ್ ಇನ್‌ಸ್ಪೆಕ್ಟರ್‌ ಗೋಪಾಲ್‌ನಾಯಕ್‌, ಸಬ್‌ಇನ್‌ಸ್ಪೆಕ್ಟರ್ ಎಂ.ಶ್ರೀನಿವಾಸ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು