ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ: ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಫಾಲೋ ಮಾಡಿ
Comments

ಕೋಲಾರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬುಧವಾರ (ಆ.5) ಭೂಮಿ ಪೂಜೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್‌ ಕಟ್ಟೆಚ್ಚರ ವಹಿಸಲಾಗಿದೆ.

ಕೋಮು ಸೌಹಾರ್ದತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಗುರುವಾರ (ಆ.6) ಮಧ್ಯಾಹ್ನ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಜನವಸತಿ ಹೆಚ್ಚಿರುವ ಬಡಾವಣೆಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ.

ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. 5 ಜನಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸ್ಫೋಟಕ ವಸ್ತುಗಳು ಅಥವಾ ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ. ಜಿಲ್ಲೆಯಾದ್ಯಂತ ಬಾರ್ ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಎಲ್ಲಾ ಬಗೆಯ ಮದ್ಯದಂಗಡಿಗಳನ್ನು ಆ.6ರ ಮಧ್ಯಾಹ್ನ 12 ಗಂಟೆವರೆಗೆ ಬಂದ್‌ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT