ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಸಿ ಕ್ರೀಡೆಗೆ ಉತ್ತೇಜನ ನೀಡಿ

Last Updated 22 ಮಾರ್ಚ್ 2022, 14:51 IST
ಅಕ್ಷರ ಗಾತ್ರ

ಕೋಲಾರ: ‘ದೇಸಿ ಕ್ರೀಡೆಗಳಿಗೆ ಉತ್ತೇಜನ ನೀಡಲು ತಾಲ್ಲೂಕಿನಲ್ಲಿ ಹಲವು ಕ್ರೀಡಾಕೂಟ ಆಯೋಜಿಸಲಾಗುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಅರಿಕೆರೆ ಮಂಜುನಾಥ್‍ಗೌಡ ತಿಳಿಸಿದರು.

ತಾಲ್ಲೂಕಿನ ಗುಟ್ಟಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ‘ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿ ದೇಸಿ ಆಟಗಳು ಕಡಿಮೆಯಾಗುತ್ತಿವೆ. ಹೀಗಾಗಿ ಹಳ್ಳಿ ಸೊಗಡಿನ ಕ್ರೀಡೆಗಳಿಗೆ ಉತ್ತೇಜನ ನೀಡಬೇಕಿದೆ’ ಎಂದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಕೋಲಾರದಲ್ಲಿ ನಿರೀಕ್ಷೆಯಂತೆ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಕ್ಷೇತ್ರ ತುಂಬಾ ಹಿಂದುಳಿದಿದೆ. ಇಲ್ಲಿನ ಜನರು ಕಷ್ಟ ಜೀವಿಗಳಾಗಿದ್ದು, ಮಳೆ ನೀರನ್ನು ಆಶ್ರಯಿಸಿ ಕೃಷಿ ಮಾಡುತ್ತಿದ್ದಾರೆ. ಜಿಲ್ಲೆಯ ರೈತರಿಗೆ ಸರ್ಕಾರ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ನೀಡದಿರುವುದು ದುರಂತ’ ಎಂದು ಕಳವಳ ವ್ಯಕ್ತಪಡಿಸಿದರು.

‘ಜಿಲ್ಲೆಯು ತೋಟಗಾರಿಕೆ ಬೆಳೆಗಳಿಗೆ ಪ್ರಸಿದ್ಧವಾಗಿದೆ. ಆದರೆ, ಜಿಲ್ಲೆಯಲ್ಲಿ ಮಾವು ಹಾಗೂ ಟೊಮೆಟೊ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿಲ್ಲ. ಟೊಮೆಟೊ ಬೆಲೆ ಕುಸಿದಾಗ ರೈತರು ಆರ್ಥಿಕವಾಗಿ ತ್ರೀವ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಟೊಮೆಟೊ ಬೆಳೆಗಾರರ ನೆರವಿಗೆ ಧಾವಿಸಿ ಬೆಂಬಲ ಬೆಲೆ ನಿಗದಿಪಡಿಸಿದ್ದರೆ ರೈತರು ಸ್ವಲ್ಪ ಮಟ್ಟಿಗೆ ಸಾಲದ ಹೊರೆಯಿಂದ ಹೊರ ಬರಲು ಸಹಾಯವಾಗುತ್ತದೆ' ಎಂದು ಅಭಿಪ್ರಾಯಪಟ್ಟರು.

ಮುಖಂಡರಾದ ಗಜೇಂದ್ರ, ನವೀನ್, ವೀರೇಂದ್ರ ಪಾಟೀಲ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT