ಗುರುವಾರ , ಡಿಸೆಂಬರ್ 2, 2021
19 °C

ಬಾಲ ಕಾರ್ಮಿಕರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಲೂರು: ಆರ್.ಟಿ.ಎಂ ಫೋರ್ ಟೇಬಲ್ ಕ್ಯಾಬೀಸ್ ಕಬ್ಬಿಣದ ಅಂಗಡಿ ಪೆಟ್ಟಿಗೆಗಳನ್ನು ತಯಾರಿಸುವ ಕಾರ್ಖಾನೆಯ ಮೇಲೆ ಬುಧವಾರ ದಾಳಿ ನಡೆಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು ಇಬ್ಬರು ಬಾಲ
ಕಾರ್ಮಿಕರನ್ನು ರಕ್ಷಿಸಿದ್ದಾರೆ. ಕಾರ್ಖಾನೆಯ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಲ್ಲೂಕು ಕಾರ್ಮಿಕ ನಿರೀಕ್ಷಕರಾದ ಮಂಜುನಾಥ್‌ಪ್ರಸಾದ್ ನೇತೃತ್ವದಲ್ಲಿ ತಾಲ್ಲೂಕಿನ ಚೊಕ್ಕಂಡಹಳ್ಳಿ ಗೇಟ್ ಮಡಿವಾಳ ಗ್ರಾಮ ಪಂಚಾಯಿತಿ ಬಳಿ ಇರುವ ಖಾಸಗಿ ಜಮೀನಿನಲ್ಲಿ ಅನಧಿಕೃತವಾಗಿ ಆರ್.ಟಿ.ಎಂ ಫೋರ್ ಟೇಬಲ್ ಕ್ಯಾಬೀಸ್ ಕಾರ್ಖಾನೆ ಮೇಲೆ ದಾಳಿ ನಡೆಸಲಾಯಿತು.

ಬಾಲ ಕಾರ್ಮಿಕರಿರುವ ಬಗ್ಗೆ ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಕಾರ್ಖಾನೆಯ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಬಚ್ಪನ್ ಬಚಾವೋ ಆಂದೋಲನದ ರಾಜ್ಯ ಸಂಚಾಲಕ ಬಿನು ಕೂರ್ಗೀಸ್, ಮಕ್ಕಳ ಸಹಾಯವಾಣಿ ಸಿಬ್ಬಂದಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚವ್ವೇನಹಳ್ಳಿ ವಿಜಿ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಎಂ.ವಿ. ಶ್ರೀನಿವಾಸ್, ದಸಂಸ ತಾಲೂಕು ಅಧ್ಯಕ್ಷ ಎಸ್.ಎಂ. ವೆಂಕಟೇಶ್, ಹಾರೋಹಳ್ಳಿ ಮುನಿರಾಜ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.