ಭಾನುವಾರ, ಆಗಸ್ಟ್ 16, 2020
21 °C

ನಿರ್ಗತಿಕ ವ್ಯಕ್ತಿಯ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ನಗರದ ಟಮಕ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳಿಂದ ನಿರ್ಗತಿಕರಾಗಿ ಸುತ್ತಾಡಿಕೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಅಂಗವಿಲಕರ ಕಲ್ಯಾಣಾಧಿಕಾರಿ ಜಗದೀಶ್‌ ರಕ್ಷಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಈ ವ್ಯಕ್ತಿ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಸಿಬ್ಬಂದಿ ಜತೆ ಸ್ಥಳಕ್ಕೆ ಹೋದ ಜಗದೀಶ್‌ ವ್ಯಕ್ತಿಯನ್ನು ರಕ್ಷಿಸಿದರು. ಬಳಿಕ ಬೆಂಗಳೂರಿನ ಹೋಮ್ ಫಾರ್ ಹೋಪ್‌ ಕೇಂದ್ರಕ್ಕೆ ಸ್ಥಳಾಂತರಿಸಿದರು.

‘ಹಿರಿಯ ನಾಗರೀಕರಾದ ರಮಾನಾಥ್ ಮತ್ತು ಸ್ನೇಹಿತರು ಈ ನಿರ್ಗತಿಕ ವ್ಯಕ್ತಿಯನ್ನು ಗುರುತಿಸಿ ಇಲಾಖೆಯ ಗಮನ ಸೆಳೆದರು. ಸಾರ್ವಜನಿಕರು ಸಂಕಷ್ಟದಲ್ಲಿರುವ ಹಿರಿಯ ನಾಗರೀಕರ ಬಗ್ಗೆ ಇಲಾಖೆಗೆ ಮಾಹಿತಿ ನೀಡಿದರೆ ಅಂತಹವರನ್ನು ರಕ್ಷಣೆ ಮಾಡುತ್ತೇವೆ’ ಎಂದು ಜಗದೀಶ್ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು