ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯ್ತಿ ಸಿಬ್ಬಂದಿ ಸಲ್ಲಾಪ: ಸದಸ್ಯರ ಪ್ರತಿಭಟನೆ

ಮೊಬೈಲ್‌ನಲ್ಲಿ ಹರಿದಾಡುತ್ತಿರುವ ಖಾಸಗಿ ಕ್ಷಣಗಳ ಫೋಟೊ: ಗ್ರಾಮಸ್ಥರ ಆಕ್ರೋಶ
Published 13 ಮೇ 2024, 20:07 IST
Last Updated 13 ಮೇ 2024, 20:07 IST
ಅಕ್ಷರ ಗಾತ್ರ

ಕೆಜಿಎಫ್‌: ‘ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಬ್ಬಂದಿ ಖಾಸಗಿ ಕ್ಷಣಗಳ ಫೋಟೊ ಬಹಿರಂಗವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಸೋಮವಾರ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದರು.

‘ಕಚೇರಿಯ ಬಿಲ್ ಕಲೆಕ್ಟರ್ ಮತ್ತು ಮಹಿಳಾ ಉದ್ಯೋಗಿ ಕಚೇರಿಯಲ್ಲಿಯೇ ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಖಾಸಗಿ ಕ್ಷಣಗಳ ಅಶ್ಲೀಲ ಚಿತ್ರ ತೆಗೆಸಿಕೊಂಡಿದ್ದಾರೆ. ಕೆಲಸ ಮಾಡುತ್ತಿದ್ದ ಕೊಠಡಿಯ ಸಿಸಿಟಿವಿ ಕ್ಯಾಮೆರಾದ ವೈರ್ ಕತ್ತರಿಸಲಾಗಿದೆ’ ಎಂದು ಪ್ರತಿಭಟನಕಾರರು ಆರೋಪ ಮಾಡಿದ್ದಾರೆ.

’ಗ್ರಾಮಸ್ಥರು ನಾಚಿಕೆಯಿಂದ ತಲೆತಗ್ಗಿಸುವ ಘಟನೆ ನಡೆದಿವೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಈ ಮಾಹಿತಿ ತಿಳಿಸಿದ್ದರೂ ಕ್ರಮ ಕೈಗೊಳ್ಳದೆ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ. ಮಹಿಳೆಯರು ಪಂಚಾಯಿತಿ ಕಚೇರಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಪಂಚಾಯಿತಿ ಸಭೆ ಕರೆದು ನಿರ್ಣಯ ಅಂಗೀಕರಿಸಬೇಕು’ ಎಂದು 14 ಸದಸ್ಯರು ಮನವಿ ಸಲ್ಲಿಸಿದರು.

‘ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಸಭೆ ನಡೆಸಲು ಬರುವುದಿಲ್ಲ. ಸಂಬಂಧಪಟ್ಟ ನೌಕರರ ವಿರುದ್ಧ ಕೂಡ ಕ್ರಮ ಕೈಗೊಳ್ಳಲು ಚುನಾವಣಾಧಿಕಾರಿಯ ಅನುಮತಿ ಪಡೆಯಬೇಕು ಎಂದು ಪಂಚಾಯಿತಿ ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೋಟಿಸ್‌: ‘ಈಗಾಗಲೇ ತಪ್ಪಿತಸ್ಥ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಮೂರು ದಿನಗಳೊಳಗೆ ಉತ್ತರ ನೀಡುವಂತೆ ತಿಳಿಸಲಾಗಿದೆ. ಉತ್ತರ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಹರ್ತಿ ತಿಳಿಸಿದ್ದಾರೆ.

- ಲೈಂಗಿಕ ಕಿರುಕುಳ; ಸಹೋದ್ಯೋಗಿ ವಿರುದ್ಧ ದೂರು

ರಾಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಬಿಲ್‌ ಕಲೆಕ್ಟರ್ ಆಗಿರುವ ಅರ್ಜುನ್‌ ಹರಿಕೃಷ್ಣ (32) ಎಂಬಾತ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆ ಸೋಮವಾರ ಸಂಜೆ ಬೇತಮಂಗಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ‘ಆರೋಪಿಯು ಕಚೇರಿಯ ಮೇಲಿನ ಕೊಠಡಿಗೆ ಬಂದು ಅಸಭ್ಯವಾಗಿ ವರ್ತಿಸಿದ್ದಾರೆ. ಮನೆ ಕಟ್ಟಿಸಿಕೊಡುವ‌ ಪತಿಗೆ ಕೆಲಸ ಕೊಡಿಸುವ ಹಾಗೂ ನaನ್ನ ಕೆಲಸ ಕಾಯಂ ಮಾಡಿಸುವ ಭರವಸೆ ನೀಡಿ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಸುಳ್ಳು ಹೇಳಿ ಫೋಟೊ ತೆಗೆಸಿಕೊಂಡು ಅದನ್ನು ನನ್ನ ಮೊಬೈಲ್‌ನಿಂದಲೇ ಹಂಚಿಕೊಂಡಿದ್ದಾನೆ. ಫೋಟೊ ತೋರಿಸಿ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದಾನೆ. ಸರ್ಕಾರಿ ಕಚೇರಿಯಲ್ಲಿ ನಿರಂತರ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯವೆಸಗಿ ಬೆದರಿಕೆ ಹಾಕಿದ್ದಾನೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಕಲಂ 354ಎ (ಲೈಂಗಿಕ ಕಿರುಕುಳ) 354ಡಿ (ಮಹಿಳೆಗೆ ಮುಜುಗರ) 506 (ಬೆದರಿಕೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT