ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ : ಶಿಕ್ಷಣ ನೀತಿ ಖಂಡಿಸಿ ಉಪ ನಿರ್ದೇಶಕರ ಕಚೇರಿ ಮುತ್ತಿಗೆ

Published 22 ಮೇ 2023, 6:24 IST
Last Updated 22 ಮೇ 2023, 6:24 IST
ಅಕ್ಷರ ಗಾತ್ರ

ಮುಳಬಾಗಿಲು: ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಅಡವಿಟ್ಟು ಬಡವರ ಶಿಕ್ಷಣ ಕಸಿಯುತ್ತಿರುವ ಜಿಲ್ಲಾ ಶಿಕ್ಷಣ ಉಪನಿರ್ದೇಶಕರ ಶಿಕ್ಷಣ ವಿರೋಧಿ ನೀತಿ ಖಂಡಿಸಿ ಮೇ 25ರಂದು ಜಾನುವಾರು ಸಮೇತ ಶಿಕ್ಷಣ ಇಲಾಖೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ಮೂರು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದ ಭವಿಷ್ಯ ರೂಪಿಸುವ ಶಿಕ್ಷಣದ ಬಗ್ಗೆ ಯಾವುದೇ ದ್ವನಿ ಎತ್ತದೆ ರಾಜ್ಯದ ಬಡವರ ಮಕ್ಕಳನ್ನು ಅನಕ್ಷರಸ್ಥರನ್ನಾಗಿ ಮಾಡುವ ಮೂಲಕ ಬಡವರ ಬದುಕು ಕಸಿಯುತ್ತಿದೆ ಎಂದು ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಪ್ರಧಾನ ಕಾರ್ಯರ್ಶಿ ಪಾರೂಕ್‍ಪಾಷ ಮಾತನಾಡಿ, ಶಾಲೆಗಳ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶಿಕ್ಷಕರ ಕೊರತೆ ಜತೆಗೆ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಾದ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ಮಾಲೀಕರ ಜೊತೆ ಶಾಮೀಲಾಗಿ ಬಡವರ ಶಿಕ್ಷಣ ಕಸಿಯುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಹೆಬ್ಬಣಿ ಆನಂದ್‍ರೆಡ್ಡಿ, ಬಂಗಾರಿ ಮಂಜು, ವಿಜಯ್‍ಪಾಲ್, ಸುನಿಲ್‍ಕುಮಾರ್, ಭಾಸ್ಕರ್, ರಾಜೇಶ್, ಗುರುಮೂರ್ತಿ, ದೇವರಾಜ್, ವಿಶ್ವ, ಗೀರಿಶ್, ಚಂದ್ರಪ್ಪ, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್, ರಾಮಸಾಗರ ವೇಣು, ಕದರಿನತ್ತ ಅಪ್ಪೋಜಿರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT