ಕೋಲಾರ: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿಯು ಹಿಂದಿ ಭಾಷೆ ಹೇರಿಕೆ ಸಂಬಂಧ ನಡೆಸುತ್ತಿದ್ದ ಕಾರ್ಯಾಗಾರಕ್ಕೆ ಅಡ್ಡಿಪಡಿಸಿದ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಹಿಂದಿ ಭಾಷೆ ಹೇರಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧವೂ, ಕಾರ್ಯಕರ್ತರನ್ನು ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರದ ವಿರುದ್ಧವೂ ಘೋಷಣೆ ಕೂಗಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಮಾತನಾಡಿ, ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸಂಸದೀಯ ರಾಜಭಾಷಾ ಸಮಿತಿಯ ಸದಸ್ಯರು ಹಿಂದಿ ಹೇರಿಕೆ ಕುರಿತು ಕಾರ್ಯಾಗಾರ ನಡೆಸುತ್ತಿದ್ದರು. ಇದನ್ನು ಖಂಡಿಸಿದ್ದಕ್ಕೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದು, ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜಭಾಷಾ ಆಯೋಗ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ಕುತಂತ್ರವನ್ನು ಸ್ವಾತಂತ್ರ್ಯ ಪೂರ್ವದಿಂದಲೂ ನಡೆಸಿಕೊಂಡು ಬಂದಿದೆ. ಮೊಟ್ಟ ಮೊದಲ ಬಾರಿ ಈ ರಾಜಭಾಷಾ ಸಮಿತಿಗೆ ನೇರವಾಗಿ ಬಿಸಿ ಮುಟ್ಟಿಸುವ ಕೆಲಸಕ್ಕೆ ವೇದಿಕೆ ಮುಂದಾಗಿದ್ದು, ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿರುವುದು. ಜನರ ಆಳ್ವಿಕೆಯ ಕಾಲದಲ್ಲಿ ನಾವು ಇದ್ದೇವೆ. ರಾಜಪ್ರಭುತ್ವ ಹೋಗಿ ಎಷ್ಟೋ ದಶಕಗಳಾಗಿವೆ. ರಾಜರೇ ಇಲ್ಲದ ಕಾಲದಲ್ಲಿ ರಾಜಭಾಷೆ ಹೇರಲು ಹೇಗೆ ಸಾಧ್ಯ? ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ. ಇರುವುದು ನೆಲದ, ಜನರ ಭಾಷೆಗಳು ಮಾತ್ರ ಎಂದು ತಿಳಿಸಿದರು.

ಒಕ್ಕೂಟ ಸರ್ಕಾರ ರಾಜಭಾಷಾ ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ. ಹಿಂದಿ ಹೇರಿಕೆ ದೇಶಕ್ಕೆ ಮಾರಕ ಮಾತ್ರವಲ್ಲ, ಭಾರತದ ಐಕ್ಯತೆಗೆ ಧಕ್ಕೆ ತರುತ್ತಿದೆ ಎಂದು ಖಂಡಿಸಿದರು.

ಒಕ್ಕೂಟ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು, ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಇರುವ ಎಲ್ಲ ಭಾಷೆಗಳನ್ನು ಒಕ್ಕೂಟ ಸರ್ಕಾರದ ಅಧಿಕೃತ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ದೇಶದ ಎಲ್ಲ ನುಡಿಗಳೂ ಸಮಾನ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯಾಗಾರಕ್ಕೆ ಅಡ್ಡಿಪಡಿಸಿದ ಕಾರ್ಯಕರ್ತರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ದೂರು ದಾಖಲಿಸಿ ಜೈಲಿಗೆ ಕಳುಹಿಸಲಾಗಿದ್ದು, ಕೂಡಲೇ ಅವರನ್ನು ಬಿಡುಗಡೆಗೊಳಿಸಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ವಿ.ಮುನಿರಾಜು, ಶಶಿಕುಮಾರ, ಡಿ.ವಿ.ಮಂಜನಾಥಗೌಡ, ಮಾಲೂರು ನಾರಾಣಸ್ವಾಮಿ, ನವೀನ, ರಾಮಕೃಷ್ಣಪ್ಪ, ರಾಮಣ್ಣ ಹುಸೇನ್, ರಾಮಪ್ರಸಾದ್, ಅರುಣ್ ಕುಮಾರ್, ಗಣೇಶ, ಯಶವಂತ, ಲೋಕೇಶ್, ವಿನೋದ್, ಮಂಜುನಾಥಗೌಡ, ಚಲಪತಿ, ನಾಗರಾಜ್, ಶಂಕರ್ ರೆಡ್ಡಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.