ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಡೊನೇಷನ್‌ ಹಾವಳಿಗೆ ಕಡಿವಾಣ ಹಾಕಲು ಆಗ್ರಹ, ಪ್ರತಿಭಟನೆ

Published 8 ಜೂನ್ 2024, 13:16 IST
Last Updated 8 ಜೂನ್ 2024, 13:16 IST
ಅಕ್ಷರ ಗಾತ್ರ

ಕೋಲಾರ: ಅನಧಿಕೃತ ಹಾಗೂ ಖಾಸಗಿ ಶಾಲೆಗಳ ದುಬಾರಿ ಡೊನೇಷನ್ ಹಾವಳಿಗೆ ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡಬೇಕು, ಸರ್ಕಾರಿ ಶಾಲೆ ಅಭಿವೃದ್ಧಿಪಡಿಸಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘದ ಪ್ರತಿನಿಧಿಗಳು ಡಿಡಿಪಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ಶಿಕ್ಷಣ ವ್ಯವಸ್ಥೆ ಸರಿಪಡಿಸದೆ ಹೋದರೆ ಮುಂದಿನ ದಿನಗಳಲ್ಲಿ ಮಕ್ಕಳು ಅನಕ್ಷರಸ್ಥರಾಗಿ ಪೋಷಕರಿಗೆ ಹೊರೆಯಾಗಿ ದುಶ್ಚಟಗಳಿಗೆ ಬಲಿಯಾಗುತ್ತಾರೆ. ಶಿಕ್ಷಣವನ್ನು ರಾಜಕೀಯದಿಂದ ದೂರ ಇಡಬೇಕು, ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸದ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು’ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮರಗಲ್ ಶ್ರೀನಿವಾಸ್, ಮಂಗಸಂದ್ರ ತಿಮ್ಮಣ್ಣ, ಕುವ್ವಣ್ಣ, ವೆಂಕಟೇಶಪ್ಪ, ನಾರಾಯಣಗೌಡ, ಸುಪ್ರೀಂ ಚಲ, ಶಿವಾರೆಡ್ಡಿ, ತೆರ್ನಹಳ್ಳಿ ಆಂಜಿನಪ್ಪ, ನಾಗರಾಜ್, ಯಲ್ಲಣ್ಣ, ಹರೀಶ್, ಚಂದ್ರಪ್ಪ, ಶೈಲಜ, ವಿಜಯಪಾಲ್, ರತ್ನಮ್ಮ, ಗೌರಮ್ಮ, ವೆಂಕಟಮ್ಮ ಹೆಬ್ಬಣಿ ಆನಂದರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT