ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಕ್ರಾಸ್‌ನಲ್ಲಿ ಈಚೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕೆಲವರು ನಡೆಸಿದ ಹಲ್ಲೆ ಖಂಡಿಸಿ ತಾಲ್ಲೂಕು ಎಸ್ಎಫ್ಐ ಘಟಕದ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಸಂದರ್ಭದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಖಂಡನೀಯ. ಈ ಘಟನೆಯಿಂದ ಪೋಷಕರು ಹೆಣ್ಣುಮಕ್ಕಳನ್ನು ಶಾಲಾ, ಕಾಲೇಜಿಗೆ ಕಳುಹಿಸಲು ಹೆದರುವಂತಾಗಿದೆ ಎಂದು ತಹಶೀಲ್ದಾರ್‌ಗೆ ನೀಡಿದ ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಶಾಲಾ, ಕಾಲೇಜುಗಳಲ್ಲಿ ಕುಂದುಕೊರತೆ ವಿಚಾರಣಾ ಸಭೆ ನಡೆಸಬೇಕು. ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ನೀಡಲಾಯಿತು. ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ್, ತಾಲ್ಲೂಕು ಘಟಕದ ಅಧ್ಯಕ್ಷ ಉದಯ್, ಜಂಟಿ ಕಾರ್ಯದರ್ಶಿ ಚೈತ್ರಾ, ಮುಖಂಡ ಚಂದ್ರಶೇಖರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.