ಮಾಲೂರು: ತಾಲ್ಲೂಕಿನ ಆರಳೇರಿ ರಸ್ತೆ ಡಾಂಬರ್ ಕಾಮಗಾರಿ ರಾಜಕೀಯ ಪ್ರೇರಿತದಿಂದ ಸ್ಥಗಿತಗೊಂಡಿದೆ ಎಂದು ಆರೋಪಿಸಿ ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕೆಂದು ಒತ್ತಾಯಿಸಿ ಕೆಪಿಆರ್ಎಸ್ ತಾಲ್ಲೂಕು ಘಟಕದ ಕಾರ್ಯಕರ್ತರು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ಧರಣಿ ನಡೆಸಿದರು.

ಕೆಪಿಆರ್ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಮುನಿಶ್ವಾಮಿ ಮಾತನಾಡಿ, ತಾಲ್ಲೂಕಿನ ಅರಳೇರಿ ರಸ್ತೆಯನ್ನು ಗಲಿಕರಣ ಮಾಡುವ ಉದ್ದೇಶದಿಂದ ರಸ್ತೆಯ ದುರಸ್ತಿ ಕಾಮಗಾರಿ ಆರಂಭಗೊಂಡಿದ್ದು, ರಸ್ತೆಗೆ ಜಲ್ಲಿಕಲ್ಲು ಸುರಿದು ಎರಡು ವರ್ಷ ಕಳೆದಿದೆ. ಇದರಿಂದ ದ್ವಿಚಕ್ ರವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಸಾಧ್ಯವಾಗದೆ ತೊಂದರೆಯಾಗಿದೆ ಎಂದರು.

ಅರಳೇರಿ ರಸ್ತೆ ಮೂಲಕ ತಾಲ್ಲೂಕಿನ ನೀಕಂಠ ಅಗ್ರಹಾರ, ಬಿಂಗೀಪುರ, ಅಂಗಶೆಟ್ಟಹಳ್ಳಿ, ಕುಂದೇನಹಳ್ಳಿ, ಉಪ್ಪಾರಹಳ್ಳಿ, ಚಾಕನಹಳ್ಳಿ ,ಹುಲ್ಕೂರು, ದೊಡ್ಡ ಮಲ್ಲೆ ಮುಖಾಂತರ ಟೇಕಲ್ ಗ್ರಾಮದ ಹಳ್ಳಿಗಳಿಗೆ ಸಂಪರ್ಕ ರಸ್ತೆಯಾಗಿದೆ. ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರು ಈ ಕೂಡಲೇ ರಸ್ತೆ ದುರಸ್ತಿ ಕಾಮಗಾರಿಯನ್ನು ಆರಂಭಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲ್ಲೂಕು ಆಡಳಿತದ ವಿರುದ್ಧ ಉಗ್ರ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಹಶೀಲ್ದಾರ್ ಮುನಿರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಸಿಐಟಿಯು ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಅಶೋಕ್, ಕಾರ್ಯದರ್ಶಿ ಚಲಪತಿ, ಮುಖಂಡ ವೆಂಕಟಪ್ಪ, ನಾರಾಯಣಸ್ವಾಮಿ, ಕುಮಾರ್, ಅಮರ್, ಈರಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.