ಜಿಲ್ಲೆಯಲ್ಲಿ ಪಿಯುಸಿ ಪರೀಕ್ಷೆ ಸುಸೂತ್ರ

ಶನಿವಾರ, ಮಾರ್ಚ್ 23, 2019
21 °C

ಜಿಲ್ಲೆಯಲ್ಲಿ ಪಿಯುಸಿ ಪರೀಕ್ಷೆ ಸುಸೂತ್ರ

Published:
Updated:
Prajavani

ಕೋಲಾರ: ಜಿಲ್ಲೆಯ 26 ಕೇಂದ್ರಗಳಲ್ಲಿ ಶುಕ್ರವಾರ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಮೊದಲ ದಿನ ಅರ್ಥಶಾಸ್ತ್ರ ಹಾಗೂ ಭೌತಶಾಸ್ತ್ರ ವಿಷಯಗಳ ಪರೀಕ್ಷೆಗೆ ಒಟ್ಟಾರೆ 740 ವಿದ್ಯಾರ್ಥಿಗಳು ಗೈರಾದರು.

ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 10,165 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ 9,555 ಮಂದಿ ಹಾಜರಾದರು. ಉಳಿದ 610 ವಿದ್ಯಾರ್ಥಿಗಳು ಗೈರಾದರು. ಭೌತಶಾಸ್ತ್ರ ವಿಷಯದ ಪರೀಕ್ಷೆಗೆ 4,868 ಮಂದಿ ಹೆಸರು ನೋಂದಾಯಿಸಿದ್ದರು. ಇವರಲ್ಲಿ 4,738 ವಿದ್ಯಾರ್ಥಿಗಳು ಹಾಜರಾದರು. 130 ಮಂದಿ ಪರೀಕ್ಷೆಗೆ ಗೈರಾದರು.

‘ಜಿಲ್ಲೆಯ ಯಾವುದೇ ಕೇಂದ್ರದಲ್ಲಿ ಪರೀಕ್ಷೆ ಅಕ್ರಮದ ಬಗ್ಗೆ ವರದಿಯಾಗಿಲ್ಲ. ಎಲ್ಲೆಡೆ ತುಂಬಾ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲಾಗಿದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ವೆಂಕಟಸ್ವಾಮಿ ತಿಳಿಸಿದರು.

ಪರೀಕ್ಷೆ ಆರಂಭಕ್ಕೂ ಮುನ್ನ ಮಕ್ಕಳೊಂದಿಗೆ ನೂರಾರು ಪೋಷಕರು ಪರೀಕ್ಷಾ ಕೇಂದ್ರದ ಬಳಿ ಜಮಾಯಿಸಿದ್ದ ದೃಶ್ಯ ಕಂಡುಬಂತು. ತಮ್ಮ ನೋಂದಣಿ ಸಂಖ್ಯೆ ಯಾವ ಕೊಠಡಿಯಲ್ಲಿದೆ ಎಂಬ ಬಗ್ಗೆ ವಿದ್ಯಾರ್ಥಿಗಳು ಕೇಂದ್ರದ ಸೂಚನಾ ಫಲಕ ಪರಿಶೀಲಿಸುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.

ಪರೀಕ್ಷಾ ಕೇಂದ್ರಗಳ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅಲ್ಲದೇ, ಕೇಂದ್ರದ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಜತೆಗೆ ಸುತ್ತಮುತ್ತಲಿನ ಜೆರಾಕ್ಸ್‌ ಮಳಿಗೆಗಳನ್ನು ಬಂದ್‌ ಮಾಡಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !