ಕೋಲಾರ: ಇದೇ ಡಿ.21 ರಂದು ಜಿಲ್ಲೆಯಾದ್ಯಂತ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಕಚೇಯಲ್ಲಿ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಲಸಿಕಾ ಕಾರ್ಯಕ್ರಮದಲ್ಲಿ ಮಕ್ಕಳ ಭಾಗವಹಿಸುವಿಕೆ ಬಹಳ ಮುಖ್ಯವಾಗಿರುವುದರಿಂದ ಎಲ್ಲರೂ 0 ರಿಂದ 5 ವರ್ಷದೊಳಗಿನ ತಮ್ಮ ಮಕ್ಕಳಿಗೆ 21 ರಂದು ಎಲ್ಲಾ ತಾಲ್ಲೂಕುಗಳಲ್ಲಿನ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಅಲ್ಲದೇ ವಲಸೆ, ಕಟ್ಟಡ ಕಾರ್ಮಿಕರು, ವ್ಯಾಪಾರಿಗಳು ಸಹ ಮೊಬೈಲ್ ಬೂತ್ ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಬಹುದಾಗಿದೆ. 21 ರಂದು ಬೂತ್ಗಳಲ್ಲಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಡಿ.22 ರಿಂದ 24ರ ವರೆಗೆ ಮನೆಮನೆಗೆ ತೆರಳಿ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ, ನಗರಾಭಿವೃದ್ಧಿ, ಕಾರ್ಮಿಕ, ಶಿಕ್ಷಣ, ವೈದ್ಯಕೀಯ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಾರಿಗೆ ಹೀಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಲಸಿಕಾ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖಾಧಿಕಾರಿಗಳು, ‘ಜಿಲ್ಲೆಯಲ್ಲಿ ಕಳೆದ ವರ್ಷ ಲಸಿಕಾ ಅಭಿಯಾನದಲ್ಲಿ ಶೇ 101.9 ಸಾಧನೆ ಮಾಡಲಾಗಿದೆ. 2025ನೇ ಸಾಲಿನಲ್ಲಿ 0ರಿಂದ 5ವರ್ಷದೊಳಗಿನ 1,64,991 ಮಕ್ಕಳಿದ್ದು, ಇವರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿಯೇ ಜಿಲ್ಲೆಯಲ್ಲಿ 749 ಬೂತ್ಗಳು, 37 ಟ್ರಾನ್ಸಿಟ್ ಕೇಂದ್ರಗಳಿದ್ದು, 3,064 ಲಸಿಕೆದಾರರು ಹಾಗೂ 164 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ರೈಲ್ವೆ ಸ್ಟೇಷನ್ಗಳಲ್ಲಿ, ಟ್ರಾನ್ಸಿಟ್ ತಂಡಗಳನ್ನು ರಚಿಸಿ ಅಲ್ಲಿಯೂ ಲಸಿಕೆ ನೀಡಲಾಗುವುದೆಂದು ತಿಳಿಸಿದರು.

ಜಿಲ್ಲೆಯಲ್ಲಿ ದಡಾರ ಹಾಗೂ ರುಬೆಲ್ಲಾ ನಿಯಂತ್ರಣಕ್ಕಾಗಿ ಸಹ ಲಸಿಕೆ ನೀಡಲಾಗುತ್ತಿದೆ. 2025ರ ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ ಈ ಜಿಲ್ಲೆಯಲ್ಲಿನ ಲಸಿಕಾ ಅಭಿಯಾನದಲ್ಲಿ 97.5 ರಷ್ಟು ಸಾಧನೆಯಾಗಿದೆ ಎಂದು ಹೇಳಿದರು.

ದೇಶ ಪೋಲಿಯೊ ಮುಕ್ತವಾಗಿದ್ದರೂ ಮುಂದೆ ಕೂಡ ಪ್ರಕರಣಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಜಿಲ್ಲೆಯಲ್ಲಿ 0ರಿಂದ 5 ವರ್ಷದೊಳಗಿನ 1,64,991 ಮಕ್ಕಳು 3,064 ಲಸಿಕೆದಾರರು, 164 ಮೇಲ್ವಿಚಾರಕರ ನಿಯೋಜನೆ ಕಳೆದ ವರ್ಷ ಲಸಿಕಾ ಅಭಿಯಾನದಲ್ಲಿ ಶೇ 101.9 ಸಾಧನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.