ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್‌: ಪೊಲೀಸ್ ಸಿಬ್ಬಂದಿ ಕಾರ್ಯಕ್ಷಮತೆ ಅಳೆಯಲು ಕ್ಯೂ ಆರ್ ಕೋಡ್‌

Published 13 ಡಿಸೆಂಬರ್ 2023, 14:17 IST
Last Updated 13 ಡಿಸೆಂಬರ್ 2023, 14:17 IST
ಅಕ್ಷರ ಗಾತ್ರ

ಕೆಜಿಎಫ್‌: ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಠಾಣೆಯಲ್ಲಿ ಸಿಗುವ ಸ್ಪಂದನೆಯ ಬಗ್ಗೆ ನೇರವಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸುವ ಕ್ಯೂ ಆರ್ ಕೋಟ್ ಸ್ಕ್ಯಾನ್‌ ವ್ಯವಸ್ಥೆಯನ್ನು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ.

ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ನೀಡುವ ಸೇವೆಯ ಗುಣಮಟ್ಟವನ್ನು ಮತ್ತಷ್ಟು ಉತ್ತಮಪಡಿಸಲು ಹಾಗೂ ಸಾರ್ವಜನಿಕರೊಂದಿಗೆ ಪೊಲೀಸರು ಅನ್ಯೋನ್ಯವಾಗಿ, ಅತ್ಯುತ್ತಮ ರೀತಿಯಲ್ಲಿ ಸ್ಪಂದಿಸುವಂತೆ ಅನುಕೂಲವಾಗಲು ಲೋಕಸ್ಪಂದನ ಹೆಸರಿನಲ್ಲಿ ಕ್ಯೂ ಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಪೊಲೀಸ್ ಠಾಣೆಗೆ ಭೇಟಿ ನೀಡುವಂತಹ ದೂರುದಾರರು ಅಥವಾ ಅರ್ಜಿದಾರರು ಠಾಣಾಧಿಕಾರಿಗಳು, ಅಲ್ಲಿನ ಠಾಣಾ ಸಿಬ್ಬಂದಿ ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ಸೌಹಾರ್ದತೆ, ಸೌಜನ್ಯದ ಕುರಿತು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ತಮ್ಮ ಅಭಿಪ್ರಾಯ ತಿಳಿಸಬಹುದಾಗಿದೆ. ಸ್ಕ್ಯಾನ್ ಮಾಡಿದಾಕ್ಷಣ ಮೊದಲಿಗೆ ಇರುವಂತಹ 6 ಪ್ರಶ್ನೆಗಳಿಗೆ ಸರಿ ಅಥವಾ ತಪ್ಪು ಎಂದು ಗುರುತಿಸಿ, ಅಂತಿಮವಾಗಿ ಪೊಲೀಸ್ ಸೇವೆಯ ಕುರಿತು ತಮ್ಮ ಅಭಿಪ್ರಾಯ ದಾಖಲಿಸಬಹುದಾಗಿದೆ. ಲೋಕಸ್ಪಂದನ ತಂತ್ರಾಂಶವನ್ನು ನೇರವಾಗಿ ಮೇಲಾಧಿಕಾರಿಗಳು ವೀಕ್ಷಣೆ ಮಾಡಿ, ಅಗತ್ಯ ಕ್ರಮ ಕೈಗೊಳ್ಳುವರು ಇದರಿಂದಾಗಿ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಸೇವೆ ಒದಗಿಸಲು ಅನುಕೂಲವಾಗುವುದು ಎಂಬ ಭಾವನೆಯನ್ನು ಪೊಲೀಸ್ ಇಲಾಖೆ ಹೊಂದಿದೆ.

ಸಾರ್ವಜನಿಕರು ನೀಡುವ ದೂರುಗಳು ನೇರವಾಗಿ ಸಿಗುವುದರಿಂದ ಪೊಲೀಸರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ.

-ಕೆ.ಎಂ.ಶಾಂತರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT