ಭಾನುವಾರ, ಆಗಸ್ಟ್ 1, 2021
28 °C

ಜಗಳ ಕೊಲೆಯಲ್ಲಿ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಪಾನಮತ್ತ ಸ್ನೇಹಿತರ ನಡುವೆ ಸೋಮವಾರ ರಾತ್ರಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕುರ್ಕಿ ಗ್ರಾಮದ ಮುನಿಯಪ್ಪ (60) ಎಂಬುವರು ಕೊಲೆಯಾಗಿದ್ದು, ಅವರ ಸ್ನೇಹಿತ ಆರೋಪಿ ಕೃಷ್ಣಪ್ಪನನ್ನು ವೇಮಗಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮದ್ಯವ್ಯಸನಿಗಳಾದ ಇವರಿಬ್ಬರೂ ರಾತ್ರಿ ಮದ್ಯಪಾನ ಮಾಡಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಾಲಯದ ಬಳಿ ಜಗಳವಾಡಿದ್ದಾರೆ. ನಂತರ ಜಗಳ ವಿಕೋಪಕ್ಕೆ ತಿರುಗಿ ಆರೋಪಿಯು ಮುನಿಯಪ್ಪನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿದ್ದರಿಂದ ಮುನಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು