ಬುಧವಾರ, ಅಕ್ಟೋಬರ್ 27, 2021
21 °C

ಸ್ನೇಹಿತರ ಜಗಳ: ಕೊಲೆಯಲ್ಲಿ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲ್ಲೂಕಿನ ನರಸಾಪುರದ ಕುರ್ಕಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಮೊಬೈಲ್ ಕಳುವಾಗಿರುವ ವಿಚಾರವಾಗಿ ಸ್ನೇಹಿತರ ನಡುವೆ ನಡೆದ ಜಗಳ ಚಂದ್ರು (32) ಎಂಬುವರ ಕೊಲೆಯಲ್ಲಿ ಅಂತ್ಯಗೊಂಡಿದೆ.

ನರಸಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ಚಾಲಕರಾಗಿದ್ದ ಚಂದ್ರು ನಾಲ್ಕು ದಿನಗಳ ಹಿಂದೆ ಕಂಪನಿ ವಾಹನದಲ್ಲಿ ಮೊಬೈಲ್ ಚಾರ್ಜಿಂಗ್‌ಗೆ ಹಾಕಿ ಮಲಗಿದ್ದಾಗ ಅವರ ಮೊಬೈಲ್‌ ಕಳವಾಗಿತ್ತು. ಜತೆಗಿರುವ ಸ್ನೇಹಿತರೇ ಮೊಬೈಲ್‌ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಚಂದ್ರ ಗೆಳೆಯರೊಂದಿಗೆ ಜಗಳವಾಡಿದ್ದರು ಎಂದು ವೇಮಗಲ್‌ ಪೊಲೀಸರು ತಿಳಿಸಿದ್ದಾರೆ.

ಇದರಿಂದ ಕೋಪಗೊಂಡಿದ್ದ ಕೋಲಾರದಿಂದ ಏಳೆಂಟು ಮಂದಿಯನ್ನು ಕರೆಸಿಕೊಂಡು ಶುಕ್ರವಾರ ಸಂಜೆ ಚಂದ್ರು ಅವರ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಬಳಿಕ ಚಂದ್ರ ಅವರನ್ನು ಗ್ರಾಮದಿಂದ ಹೊರಗೆ ಎಳೆದೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು ಸದ್ಯದಲ್ಲೇ ಅವರನ್ನು ಬಂಧಿಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.