ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಪ್ರಶ್ನೆ ಸ್ಪರ್ಧೆ: 25 ತಂಡ ಆಯ್ಕೆ

Last Updated 27 ಸೆಪ್ಟೆಂಬರ್ 2019, 15:37 IST
ಅಕ್ಷರ ಗಾತ್ರ

ಕೋಲಾರ: ‘ಮಕ್ಕಳಲ್ಲಿನ ಸಾಮಾನ್ಯ ಜ್ಞಾನ ವೃದ್ಧಿಗೆ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಂದ 110 ತಂಡ ಭಾಗವಹಿಸಿದ್ದು, ಈ ಪೈಕಿ 25 ತಂಡಗಳು ವಿಭಾಗೀಯ ಮಟ್ಟದ ಆಯ್ಕೆಯಾಗಿವೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕಿ ಶಶಿವಧನ ತಿಳಿಸಿದರು.

ಇಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿ, ‘ಮಕ್ಕಳಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ಈ ಸ್ಪರ್ಧೆ ಉತ್ತಮ ವೇದಿಕೆಯಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಶಾಲೆಗಳಲ್ಲಿ ಸಮಗ್ರ ಶಿಕ್ಷಣ ಸಿಗಬೇಕು ಎಂಬುದೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಹಾಗೂ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ನಡೆಸಲಾಗುತ್ತಿದೆ. ಜತೆಗೆ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ರಸಪ್ರಶ್ನೆ ಸ್ಪರ್ಧೆ ನಡೆಸುತ್ತಿರುವುದು ಮಕ್ಕಳ ಶೈಕ್ಷಣಿಕ ಬೆಳವಣಿಗೆ ಸಹಕಾರಿ’ ಎಂದು ಹೇಳಿದರು.

‘ಜಿಲ್ಲೆಯ ಪ್ರತಿ ಪ್ರೌಢ ಶಾಲೆಯಿಂದ ತಲಾ 3 ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ವಿದ್ಯಾರ್ಥಿಗಳು ಅತಿ ಉತ್ಸಾಹದಿಂದ ಉತ್ತರ ಬರೆದಿದ್ದಾರೆ’ ಎಂದು ವಿವರಿಸಿದರು.

ಆಯ್ಕೆಯಾದ ತಂಡಗಳು: ಮಹಾವೀರ್ ಜೈನ್ ಶಾಲೆ, ಕೋಲಾರದ ಸೇಂಟ್‍ ಆನ್ಸ್ ಶಾಲೆ, ಮಹಿಳಾ ಸಮಾಜ ಶಾಲೆ, ಬೆಮಲ್ ಶಾಲೆ, ಮಹಿಳಾ ಸಮಾಜ ಪದವಿ ಪೂರ್ವ ಕಾಲೇಜು, ಚಿನ್ಮಯ ಗ್ರಾಮೀಣ ವಿದ್ಯಾಲಯ, ಬೆಮಲ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಕೋಲಾರದ ಲಿಟಲ್ ಪ್ಲವರ್ ಶಾಲೆ ತಂಡಗಳು ಆಯ್ಕೆಯಾದವು.

ನಾರಾಯಣ್ ಪದವಿ ಪೂರ್ವ ಕಾಲೇಜು, ಎಸ್‌ಡಿಸಿ ಕಾಲೇಜು, ಡೆಕ್ಕನ್ ಪದವಿ ಪೂರ್ವ ಕಾಲೇಜು, ಚನ್ನೇಗೌಡ ಮಹೇಶ್ ಪದವಿ ಪೂರ್ವ ಕಾಲೇಜು, ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT