ಕೋಲಾರ: ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ ‘ಸತ್ಯಮೇವ ಜಯತೇ’ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಏ.5ಕ್ಕೆ ಕೋಲಾರಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
‘ರಾಹುಲ್ ಗಾಂಧಿ ಅವರ ಕೋಲಾರ ಭೇಟಿಯ ಬಗ್ಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಮಾಲೋಚನೆ ನಡೆದಿದೆ. ಸಮಾವೇಶದ ರೂಪುರೇಷೆಯ ಬಗ್ಗೆಯೂ ಚರ್ಚೆ ನಡೆದಿದೆ. ಸಭೆಯಲ್ಲಿ ಸ್ಥಳೀಯ ನಾಯಕರೂ ಭಾಗವಹಿಸಿದ್ದರು. ಈ ಬಗ್ಗೆ ಕೆಪಿಸಿಸಿ ಸದ್ಯದಲ್ಲೇ ಮಾಹಿತಿ ನೀಡಲಿದೆ’ ಎಂದು ಜಿಲ್ಲೆಯ ಶಾಸಕರೊಬ್ಬರು ‘ಪ್ರಜಾವಾಣಿ’ಗೆ ಹೇಳಿದರು. 2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ನಡೆದ ಸಭೆಯಲ್ಲಿ ನೀಡಿದ್ದ ಹೇಳಿಕೆಯಿಂದಾಗಿ ರಾಹುಲ್ ಗಾಂಧಿ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿದ್ದು, ಸಂಸತ್ ಸದಸ್ಯ ಸ್ಥಾನದಿಂದ ಅನರ್ಹರಾಗಿದ್ದಾರೆ.
ಹೀಗಾಗಿ, ಇದಕ್ಕೆ ತಿರುಗೇಟು ನೀಡಲು ಕೋಲಾರದಲ್ಲೇ ಬೃಹತ್ ಸಮಾವೇಶ ನಡೆಸುವ ಯೋಜನೆ ಇದೆ ಎನ್ನಲಾಗಿದೆ. ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಅಲ್ಲದೇ, ಕೋಲಾರದಲ್ಲೂ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವುದರಿಂದ ಈ ಸಮಾವೇಶ ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.