ಬುಧವಾರ, ಡಿಸೆಂಬರ್ 8, 2021
28 °C

ರಸ್ತೆಯಲ್ಲಿ ನಿಲ್ಲುವ ಮಳೆ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ತಾಲ್ಲೂಕಿನ ಎಟ್ಟಿಕೊಡಿ ಗ್ರಾಮದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಸಿಸಿ ರಸ್ತೆಯಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ.

ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿಯ‌ ಎಟ್ಟಿಕೊಡಿ ಗ್ರಾಮದಲ್ಲಿ ಸುಮಾರು 400 ಕುಟುಂಬಗಳು ವಾಸವಿದ್ದು, ಸುಮಾರು 680 ಮತದಾರರಿದ್ದಾರೆ.

₹ 3 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸಿಸಿ ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡದ ಕಾರಣ ಮಳೆಯ ನೀರು ರಸ್ತೆಯಲ್ಲೇ ನಿಲ್ಲುತ್ತದೆ. ಮಳೆ ಬಂದು ವಾರದ ನಂತರವೂ ನೀರು ರಸ್ತೆಯಲ್ಲಿಯೇ ನಿಲ್ಲುತ್ತದೆ ಎಂದು ಮುಖಂಡ ಎಲ್. ಜಯರಾಂ ಹೇಳಿದರು.

ಎಟ್ಟಿಕೊಡಿ ಗ್ರಾಮದಲ್ಲಿ ಸಮರ್ಪಕ ಚರಂಡಿ ಇಲ್ಲದೆ ಕೊಳಚೆ ನೀರು ಮನೆಗಳ ಮುಂದೆ ಹರಿದು ಹೋಗುತ್ತದೆ. ಚರಂಡಿಗಳು ಸ್ವಚ್ಛತೆ ಇಲ್ಲದೆ ಗಿಡ ಗೆಂಟೆಗಳು ಬೆಳೆದಿವೆ. ನೀರು ಹರಿಯದಿರುವುದರಿಂದ ಸೊಳ್ಳೆ ಕಾಟ ಹೆಚ್ಚಿದೆ. ಜನರಲ್ಲಿ ಸಾಂಕ್ರಾಮಿಕ ರೋಗ ಭೀತಿಯು ಹೆಚ್ಚಿದೆ. ಈ ಬಗ್ಗೆ ಅನೇಕ  ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಿವಾಸಿ ಆರ್. ಮುನಿರಾಜು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.