ಮಳೆಯಿಂದಾಗಿ ಜಿಲ್ಲಾ ಕೇಂದ್ರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ರಸ್ತೆ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಗಳು ರಾಡಿಯಾದವು. ರೈಲ್ವೆ ಕೆಳ ಸೇತುವೆ ಹಾಗೂ ತಗ್ಗು ಪ್ರದೇಶದ ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತಿದೆ. ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ತುಂತುರು ಮಳೆಯಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.