ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನದ ಬಗ್ಗೆ ಜಾಗೃತಿ ಮೂಡಿಸಿ

Last Updated 6 ಅಕ್ಟೋಬರ್ 2019, 14:15 IST
ಅಕ್ಷರ ಗಾತ್ರ

ಕೋಲಾರ: ‘ಮತದಾನದ ಬಗ್ಗೆ ಜಾಗೃತಿ ಮೂಡಿಸಿದಾಗ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಲು ಮುಂದಾಗುತ್ತಾರೆ, ಈ ಕುರಿತು ಅರಿವು ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಗ್ರಾಮ ಪಂಚಾಯಿತಿಗಳ ಗಣಕ ಯಂತ್ರ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ಪರಿಷ್ಕರಣೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುತ್ತಿದ್ದು, ಅಧಿಕಾರಿಗಳು ವ್ಯಾಪಕ ಪ್ರಚಾರ ನಡೆಸಬೇಕು. ನೋಂದಣಿಗೆ ಅರ್ಜಿ ಸಲ್ಲಿಸಿದವರಿಗೆ ದಾಖಲೆ ಪರಿಶೀಲಿಸಿ ಗುರುತಿನ ಚೀಟಿ ವಿತರಿಸಬೇಕು’ ಎಂದು ಸಲಹೆ ನೀಡಿದರು.

‘ಚುನಾವಣೆಗಳು ನಿರಂತರವಾಗಿ ನಡೆಯುವ ಪ್ರಕ್ರಿಯೆ. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ವಿಧಾನ ಸಭೆ, ವಿಧಾನ ಪರಿಷತ್ ಚುನಾವಣೆಗಳು, ಲೋಕಸಭೆ ಸೇರಿದಂತೆ ಸಾಕಷ್ಟು ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಈ ಚುನಾವಣೆಗಳು ಸುಸೂತ್ರವಾಗಿ ನಡೆಯಲು ಮತದಾರರ ಪಟ್ಟಿಯನ್ನು ಗೊಂದಲಗಳಿಲ್ಲದಂತೆ ಸಿದ್ದಪಡಿಸಿಕೊಳ್ಳಬೇಕು’ ಎಂದರು.

‘ಮತದಾರರ ಪಟ್ಟಿಯಲ್ಲಿ ವಿವರಗಳನ್ನು ಪರಿಶೀಲನೆ ಮಾಡಲು ಬೂತ್‌ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜತೆಗೆ ಜಿಲ್ಲೆಯಲ್ಲಿ 121 ಸಾಮಾನ್ಯ ಸೇವೆಗಳು ಪ್ರಾರಂಭಿಸಲಾಗಿದ್ದು, ಇಲ್ಲಿಯೂ ಸಹ ಪರಿಶೀಲನೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ಮತದಾರರರು ಚುನಾವಣೆ ನಡೆಯುವ ಸಮಯದಲ್ಲಿ ಮತದಾನದಿಂದ ಹೊರಗುಳಿಯದೆ ಶೇ.100 ಮತ ಚಲಾವಣೆ ನಡೆಯಬೇಕು ಎಂಬುದು ಪರಿಷ್ಕರಣೆಯ ಉದ್ದೇಶ’ ಎಂದು ಹೇಳಿದರು.

ಜಿ.ಪಂ ಉಪ ಕಾರ್ಯದರ್ಶಿ ಪಿ.ಸಂಜೀವಪ್ಪ, ಯೋಜನಾ ನಿರ್ದೇಶಕ ಎಂ.ಮುನಿಕೃಷ್ಣಪ್ಪ, ಸಹಾಯಕ ಕಾರ್ಯದರ್ಶಿ ಎಂ.ವೆಂಕಟಾಚಲಪತಿ, ಸಹಾಯಕ ಯೋಜನಾ ನಿರ್ದೇಶಕ ಎಚ್.ವಿ.ವಸಂತ್ ಕುಮಾರ್, ನೋಡಲ್ ಅಧಿಕರಿ ಗೋವಿಂದಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT