ಬುಧವಾರ, ಮಾರ್ಚ್ 3, 2021
30 °C

ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಭಾರತೀಯರ ಆರಾಧ್ಯದೈವ ಶ್ರೀರಾಮನ ಭವ್ಯ ಮಂದಿರ ನಿರ್ಮಾಣದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಭಾಗಿಯಾಗಬೇಕು. ಈ ಕಾರಣಕ್ಕೆ ರಾಮಮಂದಿರ ನಿಧಿ ಸಮರ್ಪಣೆ ಮಾಡಬೇಕು’ ಎಂದು ಬಜರಂಗದಳ ಸದಸ್ಯ ಬಾಲಾಜಿ ಮನವಿ ಮಾಡಿದರು.

ನಗರದ ರಾಮದೇವರ ಗುಡಿಯಲ್ಲಿ ಸೋಮವಾರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ‘ಶ್ರೀರಾಮನ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಮಾಡುವುದು ಈ ದೇಶದ ಗೌರವದ ಪ್ರತೀಕ’ ಎಂದು ತಿಳಿಸಿದರು.

‘ಮಂದಿರ ನಿರ್ಮಾಣಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ದೇಶದ ಪ್ರತಿ ಪ್ರಜೆಯೂ ನಿಧಿ ಸಮರ್ಪಿಸಿ ಈ ಕಾರ್ಯದಲ್ಲಿ ಭಾಗಿಯಾಗುತ್ತಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೊಡ್ಡಪೇಟೆ, ಕಿಲಾರಿಪೇಟೆ ಸೇರಿದಂತೆ ನಗರದ ಹಲವೆಡೆ ನಿಧಿ ಸಮರ್ಪಣಾ ಅಭಿಯಾನ ನಡೆಸಲಾಯಿತು. ಬಜರಂಗದಳ ಸದಸ್ಯರಾದ ಜಗದೀಶ್, ಓಂಪ್ರಕಾಶ್, ಚಿನ್ನಪ್ಪ, ನಾಗರಾಜ್, ಮಹೇಶ್, ಮುನಿವೆಂಕಟ ಯಾದವ್, ಮಂಜುನಾಥ್ ಪಾಲ್ಗೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು