ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಮನೆಗೆ ರಮೇಶ್‌ ಕುಮಾರ್‌ ಪರಿಗಣಿಸಲು ಒತ್ತಾಯ; ಸೂಕ್ತ ವ್ಯಕ್ತಿ ಎಂದು ಸಚಿವ

Published 24 ಮೇ 2024, 15:34 IST
Last Updated 24 ಮೇ 2024, 15:34 IST
ಅಕ್ಷರ ಗಾತ್ರ

ಕೋಲಾರ: ‘ಮೇಲ್ಮನೆ ಸದಸ್ಯರಾಗಲು ಕೆ.ಆರ್‌.ರಮೇಶ್‌ ಕುಮಾರ್‌ ಅತ್ಯಂತ ಸೂಕ್ತ ವ್ಯಕ್ತಿ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲು ನಮ್ಮ ಬೆಂಬಲವಿದೆ, ಉತ್ತಮ ಆಯ್ಕೆ ಕೂಡ. ನಾವೆಲ್ಲರೂ ಅವರನ್ನು ಸಮರ್ಥಿಸಿಕೊಳ್ಳುತ್ತೇವೆ’ ಎಂದು ಸಚಿವ ಬೈರತಿ ಸುರೇಶ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪರಿಷತ್‌ ಸದಸ್ಯ ಸ್ಥಾನವನ್ನು ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಕೇಳಿದರೂ ನಮ್ಮ ಒಪ್ಪಿಗೆ ಇದೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ’ ಎಂದರು.

‌ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಿಂದ ಬಂದಿದ್ದ ಕಾಂಗ್ರೆಸ್‌ ನಿಯೋಗ ಕೂಡ ರಮೇಶ್‌ ಕುಮಾರ್‌ ಅವರನ್ನು ಎಂಎಲ್‌ಸಿ ಮಾಡಬೇಕೆಂದು ಸಚಿವರಿಗೆ ಹಕ್ಕೊತ್ತಾಯ ಮಂಡಿಸಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT