ಶನಿವಾರ, ಜನವರಿ 18, 2020
19 °C

ರಮೇಶ್‌ಕುಮಾರ್‌– ಶರತ್‌ ಬಚ್ಚೇಗೌಡ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಪಾಳಯ ಸೇರುವ ಗುಸುಗುಸು ಕೇಳಿಬರುತ್ತಿರುವ ಬೆನ್ನಲ್ಲೇ ಅವರು ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್‌ ಗ್ರಾಮದಲ್ಲಿರುವ ರಮೇಶ್‌ಕುಮಾರ್‌ರ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ ಶರತ್‌ ಬಚ್ಚೇಗೌಡ ಸುಮಾರು 1 ತಾಸು ರಹಸ್ಯ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ಭೇಟಿ ಕುತೂಹಲ ಕೆರಳಿಸಿದ್ದು, ಶರತ್‌ ಬಚ್ಚೇಗೌಡ ಅವರನ್ನು ಕಾಂಗ್ರೆಸ್‌ಗೆ ಕರೆತರಲು ಕೈ ಪಾಳಯದ ಮುಖಂಡರು ತೆರೆಮರೆಯಲ್ಲೇ ಪ್ರಯತ್ನ ನಡೆಸಿದ್ದಾರೆ.

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಇದೇ ಮೊದಲ ಬಾರಿಗೆ ರಮೇಶ್‌ಕುಮಾರ್‌ ಅವರನ್ನು ಭೇಟಿಯಾದ ಶರತ್‌ ಬಚ್ಚೇಗೌಡ ಹೂಗುಚ್ಛ ನೀಡಿ ಧನ್ಯವಾದ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ರಮೇಶ್‌ಕುಮಾರ್‌ ಅವರು ಶರತ್‌ ಬಚ್ಚೇಗೌಡರನ್ನು ಆಲಂಗಿಸಿಕೊಂಡು ಅಭಿನಂದನೆ ಸಲ್ಲಿಸಿದರು. ಭೇಟಿ ಬಗ್ಗೆ ಉಭಯ ನಾಯಕರು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು