ಮಂಗಳವಾರ, ಅಕ್ಟೋಬರ್ 20, 2020
25 °C

ರವಿಕುಮಾರ್‌ ನೂತನ ಸಿಇಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಹಲವು ತಿಂಗಳಿಂದ ಖಾಲಿಯಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ ಎಂ.ಆರ್‌.ರವಿಕುಮಾರ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಈ ಹಿಂದೆ ಜಿ.ಪಂ ಸಿಇಒ ಆಗಿದ್ದ ಎಚ್‌.ವಿ.ದರ್ಶನ್‌ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿತ್ತು. ನಂತರ ಸಿಇಒ ಹುದ್ದೆಗೆ ಯಾರನ್ನೂ ನಿಯೋಜಿಸಿರಲಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರೇ ಪ್ರಭಾರವಾಗಿ ಸಿಇಒ ಹುದ್ದೆಯ ಕಾರ್ಯಭಾರ ವಹಿಸಿಕೊಂಡಿದ್ದರು.

ಸಿಇಒ ಹುದ್ದೆಗೆ ಕಾಯಂ ಅಧಿಕಾರಿ ನೇಮಿಸುವಂತೆ ಸಂಘಟನೆಗಳು ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಇದರ ಬೆನ್ನಲ್ಲೇ ಸರ್ಕಾರ ರವಿಕುಮಾರ್‌ ಅವರನ್ನು ಸಿಇಒ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿದೆ. ಸದ್ಯ ರವಿಕುಮಾರ್‌, ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ (ಕೆಎಸ್‌ಎಂಬಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು