ಮಂಗಳವಾರ, ಮೇ 24, 2022
27 °C

ಓದುವ ಹವ್ಯಾಸ ಕ್ಷೀಣ: ವಿಷಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕ್ಷೀಣಿಸಿ, ಮೊಬೈಲ್ ಅಂತರ್ಜಾಲಕ್ಕೆ ಮಾರುಹೋಗಿರುವ ಕಾರಣ ಮಾನವ ಸಂಬಂಧಗಳು ಮತ್ತು ಮಾನವನ ಜ್ಞಾನ ಭಂಡಾರ ತುಕ್ಕು ಹಿಡಿದ ಕಬ್ಬಿಣದಂತಾಗಿದೆ ಎಂದು ಬೆಳಮಾರನಹಳ್ಳಿ ಆನಂದ್ ಬೇಸರ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲೇಜಿನ ಎಲ್ಲಾ ಸಮಿತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮಾನವನ ಆರೋಗ್ಯಕ್ಕೆ ಅವಿನಾಭಾವ ಸಂಬಂಧವಿದೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಮಧುಲತಾ ಮೋಸಸ್ಸ್, ಶರಣಪ್ಪ ಗಬ್ಬೂರ್, ಸುಬ್ಬು, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಪ್ರೊ.ಎಂ. ಶ್ರೀನಿವಾಸಮೂರ್ತಿ, ಸದಸ್ಯರಾದ ಪ್ರೊ.ಆರ್.ವಿ. ಶಶಿಧರ್, ಡಾ.ಆರ್. ಶಂಕರಪ್ಪ, ಡಾ.ಎಂ.ಎನ್. ಮೂರ್ತಿ, ಪ್ರೊ.ಉಮಾ, ಪ್ರೊ.ರವಿಕುಮಾರ್, ಪ್ರೊ.ಕವಿತಾ, ಡಾ.ಕೃಷ್ಣಪ್ಪ
ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.