ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಲ್ಲ ನಿಗಮಕ್ಕೆ ಶಿಫಾರಸು ಮಾಡಿರುವ ಬಿಎಸ್‌ವೈಗೆ ಗೊಲ್ಲ ಸಮಾಜ ಅಭಿನಂದನೆ 

Last Updated 28 ಸೆಪ್ಟೆಂಬರ್ 2020, 15:22 IST
ಅಕ್ಷರ ಗಾತ್ರ

ಕೋಲಾರ: ಗೊಲ್ಲ ಸಮುದಾಯದ ನಿಗಮಕ್ಕೆ ಶಿಫಾರಸು ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಯಾದವ (ಗೊಲ್ಲ) ಸಮಾಜದ ಪರವಾಗಿ ಕರ್ನಾಟಕ ಯಾದವ ಯುವ ವೇದಿಕೆ ಅಧ್ಯಕ್ಷ ಸುಧಾಕರ್ ಯಾದವ್‌ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಗೊಲ್ಲ ಸಮುದಾಯದ ಜನಸಂಖ್ಯೆ ಸುಮಾರು 30 ಲಕ್ಷವಿದೆ. ಸಮುದಾಯವು ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ತೀರಾ ಹಿಂದುಳಿದಿತ್ತು. ಇಂತಹ ಪರಿಸ್ಥಿಯಲ್ಲಿ ಯಡಿಯೂರಪ್ಪ ಮತ್ತು ಮಂತ್ರಿಮಂಡಲದ ಸದಸ್ಯರು ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಲು ಗೊಲ್ಲ ಸಮುದಾಯದ ನಿಗಮಕ್ಕೆ ಶಿಫಾರಸು ಮಾಡಿರುವುದು ಸಂತಸದ ವಿಷಯ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾಸಕಿ ಪೂರ್ಣಿಮಾ, ರಾಜ್ಯ ಯಾದವ ಸಂಘದ ಅಧ್ಯಕ್ಷ ಶ್ರೀನಿವಾಸ್ ಹಾಗೂ ಸಮುದಾಯದ ಮುಖಂಡರು ಗೊಲ್ಲ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ. ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಅದೇ ರೀತಿ ಕಾಡು ಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT