ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ಜನ್ಮ ತಂತ್ರಾಂಶದಲ್ಲಿ ನೋಂದಣಿ

Last Updated 24 ಸೆಪ್ಟೆಂಬರ್ 2020, 15:55 IST
ಅಕ್ಷರ ಗಾತ್ರ

ಕೋಲಾರ: ‘ಇ–ಜನ್ಮ ತಂತ್ರಾಂಶದ ಮೂಲಕ ಜನನ ಮತ್ತು ಮರಣದ ನೋಂದಣಿ ಮಾಡಿಕೊಂಡು ನಾಡ ಕಚೇರಿಯಲ್ಲಿ ಪ್ರಮಾಣಪತ್ರ ಪಡೆಯಬಹುದು’ ಎಂದು ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ಸಹಾಯಕ ಸಾಂಖ್ಯಿಕ ಅಧಿಕಾರಿ ವೆಂಕಟರಮಣಪ್ಪ ತಿಳಿಸಿದರು.

ಜನನ ಮತ್ತು ಮರಣ ನೋಂದಣಿ ನಿಯಮಗಳು ಹಾಗೂ ಇ–ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ಇಲ್ಲಿ ಗುರುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ‘ಪ್ರತಿ ವರ್ಷ ಜನನ ಮತ್ತು ಮರಣ ನೋಂದಣಿ ಕಾರ್ಯ ನಡೆಸಲಾಗುತ್ತದೆ. ಆದರೆ, ಈ ವರ್ಷ ಇ–ಜನ್ಮ ತಂತ್ರಾಂಶದಲ್ಲಿ ಜನನ ಮತ್ತು ಮರಣ ನೋಂದಣಿ ಕಾರ್ಯ ಮಾಡಲಾಗುತ್ತಿದೆ’ ಎಂದು ಹೇಳಿದರು.

‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಮಾತ್ರ ಪಡೆಯಲು ಅವಕಾಶವಿದೆ. ಆದರೆ, ನೋಂದಣಿ ಮಾಡಿಸುವಂತಿಲ್ಲ’ ಎಂದು ಮಾಹಿತಿ ನೀಡಿದರು.

ಕಂಪ್ಯೂಟರ್ ಆಪರೇಟರ್‌ಗಳು ಮತ್ತು ಗ್ರಾಮ ಲೆಕ್ಕಿಗರಿಗೆ ಪ್ರಾತ್ಯಕ್ಷಿಕೆ ಮೂಲಕ ಇ–ಜನ್ಮ ತಂತ್ರಾಂಶದ ಬಗ್ಗೆ ಮಾಹಿತಿ ನೀಡಲಾಯಿತು. ವೇಮಗಲ್‌ ಉಪ ತಹಶೀಲ್ದಾರ್ ಹೇಮಲತಾ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ಸಾಂಖ್ಯಿಕ ನಿರೀಕ್ಷಕ ಕೃಷ್ಣಮೂರ್ತಿ, ಸಹಾಯಕ ಸಾಂಖ್ಯಿಕ ಅಧಿಕಾರಿ ಶ್ರೀನಿವಾಸರೆಡ್ಡಿ, ಗಣತಿದಾರ ಕೆ.ಮಂಜುನಾಥ್‌ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT