ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಉತ್ಪನ್ನ ತಿರಸ್ಕರಿಸಿ: ನ್ಯಾಯಾಧೀಶ ಈಶ್ವರ್

Last Updated 1 ಜೂನ್ 2022, 4:56 IST
ಅಕ್ಷರ ಗಾತ್ರ

ಮುಳಬಾಗಿಲು: ‘ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ತಿರಸ್ಕರಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಸಲಹೆ ನೀಡಿದರು.

ನಗರದ ಹಳೆಯ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ವಿಶ್ವ ತಂಬಾಕು ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು ಶಿಬಿರ ಮತ್ತು ರಾಷ್ಟ್ರೀಯ ಕಿಶೋರ ಸ್ವಸ್ಥ ತಂಬಾಕು ನಿಯಂತ್ರಣ ಜಾಗೃತಿ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ನರಸಿಂಹಮೂರ್ತಿ ಮಾತನಾಡಿ, ತಂಬಾಕು ಉತ್ಪನ್ನಗಳು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ತಂಬಾಕು ಬಳಕೆಯಿಂದ ದೂರವಿರಬೇಕು. ಈ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಎಲ್ಲರೂ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಹಿರಿಯ ವಕೀಲ ಎನ್. ಶೇಖರ್ ತಂಬಾಕು ನಿಷೇಧ ಕಾನೂನು ಅರಿವಿನ ಬಗ್ಗೆ ಮಾತನಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಎಂ. ಸದಾಶಿವಯ್ಯ, ಗೌರವಾಧ್ಯಕ್ಷ ಎಂ.ಎಸ್. ಶ್ರೀನಿವಾಸರೆಡ್ಡಿ. ಕಾರ್ಯದರ್ಶಿ ಸಿ. ಸುಬ್ರಮಣಿ, ಜಂಟಿ ಕಾರ್ಯದರ್ಶಿ ವಿ. ಸುಬ್ರಮಣಿ, ವಕೀಲ ಅಲಗನಹಳ್ಳಿ ಆರ್. ರಮೇಶ್, ಮೆಹಬೂಬ್‌ ಪಾಷ, ದುರ್ಗಪ್ರಸಾದ್, ಐಟಿಐ ಉಪನ್ಯಾಸಕ ಕೃಷ್ಣೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT