ಶುಕ್ರವಾರ, ಡಿಸೆಂಬರ್ 4, 2020
24 °C

ಅಂತರಂಗ ಶುದ್ಧಿಗೆ ಒತ್ತು ನೀಡಿ: ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ‘ಕನ್ನಡಿ ಮುಂದೆ ನಿಂತು ಬಹಿರಂಗ ಶುದ್ಧಿ ಮಾಡಿಕೊಳ್ಳುವ ಬದಲು ದೇವರ ಮುಂದೆ ಕುಳಿತು ಅಂತರಂಗ ಶುದ್ಧಿ ಮಾಡಿಕೊಳ್ಳುವತ್ತ ಪ್ರತಿಯೊಬ್ಬರು ಚಿತ್ತ ಹರಿಸಬೇಕು’ ಎಂದು ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಸಲಹೆ ನೀಡಿದರು.

ತಾಲ್ಲೂಕಿನ ಎಮ್ಮೇನತ್ತ ಗ್ರಾ.ಪಂ. ವ್ಯಾಪ್ತಿಯ ಕನ್ನತ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗಂಗಮಾಂಭ ದೇವಿ ಮತ್ತು ಮಾರೆಮ್ಮ ದೇವಿ ದೇವಸ್ಥಾನಗಳ ಸಂಪ್ರೊಕ್ಷಣೆ, ನೂತನ ವಿಗ್ರಹ ಮತ್ತು ಗೋಪುರ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಗುರುವಾರ ಭಾಗವಹಿಸಿ ಅವರು ಮಾತನಾಡಿದರು.

ದೇವಾಲಯ ನಿರ್ಮಾಣಕ್ಕೆ ₹ 3 ಲಕ್ಷ ಆರ್ಥಿಕ ನೆರವು ನೀಡಲಾಗಿದೆ. ಗ್ರಾಮಗಳಲ್ಲಿ ದೇವರ ಕಾರ್ಯಕ್ಕೆ ರಾಜಕೀಯ ಬೆರಸಬಾರದು. ಪಕ್ಷಾತೀತವಾಗಿ ಎಲ್ಲರೂ ಪಾಲ್ಗೊಳ್ಳಬೇಕು. ಒಗ್ಗಟ್ಟಿನಿಂದ ಇರಬೇಕು. ಚುನಾವಣಾ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು ಎಂದರು.

ಗಂಗಮ್ಮ ಮತ್ತು ಮಾರೆಮ್ಮ ಊರನ್ನು ಕಾಯುತ್ತಾರೆ ಎಂಬ ನಂಬಿಕೆಯಿದೆ. ಇಂದಿಗೂ ಪ್ರತಿ ಹಳ್ಳಿಗಳಲ್ಲಿ ಈ ಶಕ್ತಿದೇವತೆಗಳ ದೇವಾಲಯ ನಿರ್ಮಿಸಿ ಪೂಜಾ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಯುವಪೀಳಿಗೆ ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ 8 ವರ್ಷಗಳಿಂದ ಯಾವುದೇ ರಾಜಕೀಯ ಅಧಿಕಾರ ಇಲ್ಲದಿದ್ದರೂ ಸಮಾಜ ಸೇವೆ ಮುಂದುವರಿಸಿಕೊಂಡು ಬರುತ್ತಿದ್ದೇನೆ. ತಾಲ್ಲೂಕಿನ ದೇವಾಲಯಗಳ ಜೀರ್ಣೋದ್ಧಾರ, ಯುವಕರಿಗೆ ಕ್ರೀಡಾ ಪ್ರೋತ್ಸಾಹ, ಬಡರೋಗಿಗಳಿಗೆ ಆರ್ಥಿಕ ಸಹಾಯ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡುತ್ತಿದ್ದೇನೆ. ಜೆಡಿಎಸ್ ಸಂಘಟನೆಗೆ ಒತ್ತು ನೀಡಿದ್ದೇನೆ ಎಂದು ಹೇಳಿದರು.

ಪ್ರಧಾನ ಅರ್ಚಕರಾದ ಜಿ. ಅನಂತಪದ್ಮನಾಭ, ಎಸ್.ಪಿ. ರಾಮಕೃಷ್ಣಾಮಾಚಾರ್ ನೇತೃತ್ವದಡಿ ವಿಶೇಷ ಹೋಮ, ಅಭಿಷೇಕ, ಪೂಜಾ ಕಾರ್ಯಕ್ರಮ ನಡೆಯಿತು.

ಜೆಡಿಎಸ್ ಮುಖಂಡ ಶ್ರೀನಿವಾಸರೆಡ್ಡಿ, ರಾಜ್ಯ ಜೈವಿಕ ಇಂಧನ ಮಂಡಳಿಯ ಮಾಜಿ ಉಪಾಧ್ಯಕ್ಷ ಜಿ. ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಕಿಸಾನ್ ಖೇತ್ ರಾಜ್ಯ ಕಾರ್ಯದರ್ಶಿ ಸುಭಾಷ್‌ ಗೌಡ, ಎಸ್‌ಸಿ ವಿಭಾಗದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಜಾವಿದ್, ರೆಡ್ಡಪ್ಪ ರೆಡ್ಡಿ, ಎಮ್ಮೇನತ್ತ ವೆಂಕಟೇಶ್, ಕರಡಗೂರು ವೆಂಕಟೇಶಪ್ಪ, ಪ್ರಸನ್ನ ಕುಮಾರ್, ಕನ್ನಸಂದ್ರ ನಾರಾಯಣಪ್ಪ, ರಮೇಶ್, ಕರಡಗೂರು ಶ್ರೀನಿವಾಸ್, ವೆಂಕಟರವಣಪ್ಪ, ಶ್ರೀನಿವಾಸ್, ಓಬಳರೆಡ್ಡಿ, ಗೋವಿಂದಪ್ಪ, ಬಂಗಾರಪ್ಪ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.