ಮಂಗಳವಾರ, ಜೂನ್ 15, 2021
22 °C

ರೆಮ್‌ಡಿಸಿವರ್‌ ಮಾರಾಟ: ಆರೋಪಿಗಳು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಕಾಳಸಂತೆಯಲ್ಲಿ ರೆಮ್‌ಡಿಸಿವರ್‌ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ನಗರದ ಪೊಲೀಸರು ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 8 ಮಂದಿಯನ್ನು ಭಾನುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಕೊಡುವ ನೆಪದಲ್ಲಿ ಸರ್ಕಾರಿ ಆಸ್ಪತ್ರೆಗಳಿಂದ ರೆಮ್‌ಡಿಸಿವರ್‌ ಲಸಿಕೆ ತಂದು ಕಾಳಸಂತೆಯಲ್ಲಿ ಸುಮಾರು ₹ 30 ಸಾವಿರಕ್ಕೆ ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ರೆಮ್‌ಡಿಸಿವರ್ ಮಾರಾಟ ಮಾಡುತ್ತಿದ್ದ ಬಗ್ಗೆ ಬಾತ್ಮಿದಾರರು ನೀಡಿದ ಸುಳಿವು ಆಧರಿಸಿ ಲಸಿಕೆ ಖರೀದಿದಾರರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿ 8 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿಗಳು ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ವಿವಿಧೆಡೆ ಸಾಕಷ್ಟು ಮಂದಿಗೆ ಲಸಿಕೆ ಮಾರಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಕ್ರಮವಾಗಿ ಲಸಿಕೆ ಕೊಡುತ್ತಿದ್ದ ವ್ಯಕ್ತಿಗಳ ಬಗ್ಗೆ ಆರೋಪಿಗಳು ಮಾಹಿತಿ ಕೊಡದೆ ಸತಾಯಿಸುತ್ತಿದ್ದಾರೆ. ದಂಧೆ ಪ್ರಮುಖ ಆರೋಪಿ ಪತ್ತೆ ಕಾರ್ಯ ಮುಂದುವರಿದಿದೆ. ಪ್ರಕರಣ ಸಂಬಂಧ ಗಲ್‌ಪೇಟೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು