ಕೋಲಾರ: ‘ದೇಶ ಭಕ್ತಿ ಉಸಿರಾಗಿಸಿಕೊಂಡು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಯೋಧರನ್ನು ಸ್ಮರಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ತಿಳಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕಿನ ಬೆಗ್ಲಿಹೊಸಹಳ್ಳಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಹಲವು ಮಹನೀಯರ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಈ ಮಹನೀಯರ ಸಂಘಟಿತ ಹೋರಾಟ ಮತ್ತು ಗಡಿಯಲ್ಲಿ ಸೈನಿಕರು ಮಾತೃಭೂಮಿ ರಕ್ಷಣೆಗೆ ನಿರಂತರವಾಗಿ ಮಾಡುತ್ತಿರುವ ಸೇವೆಯು ನಮಗೆ ಆದರ್ಶವಾಗಬೇಕು’ ಎಂದರು.

‘ದೇಶದ ಜನರು ಸಮೃದ್ಧಿ ಮತ್ತು ಸಾಧನಗಳ ವೈಭವಯುತ ಇತಿಹಾಸ ಸಂಕ್ರಮಿಸುವ ಹಾಗೂ ಸ್ಮರಿಸುವ ಉದ್ದೇಶದಿಂದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಕರು, ರೈತರು, ಸೈನಿಕರ ಸೇವೆ ಶ್ಲಾಘನೀಯ. ಹೋರಾಟಗಾರರ ತ್ಯಾಗ ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ದೇಶವನ್ನು ಸಾರ್ವಭೌಮ ರಾಷ್ಟ್ರವಾಗಿಸುವ ಜವಾಬ್ದಾರಿ ಪ್ರತಿ ಭಾರತೀಯರ ಮೇಲಿದೆ’ ಎಂದು ಕಿವಿಮಾತು ಹೇಳಿದರು.

‘ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರು ಸದಾ ಕ್ರಿಯಾಶೀಲರಾಗಿ ಮತ್ತು ಅಧ್ಯಯನಶೀಲರಾಗಿ ಇರಬೇಕು’ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಸಲಹೆ ನೀಡಿದರು.

ಜಿಲ್ಲಾ ವಿಜ್ಞಾನ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಚಾಮುಂಡೇಶ್ವರಿ ದೇವಿ, ನ್ಯಾಯಾಂಗ ಇಲಾಖೆ ಶಿರಸ್ತೇದಾರ್ ಸರ್ವಮಂಗಳಾ ದೇವಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.