ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಲು ಮನವಿ

ಗುರುವಾರ , ಜೂನ್ 27, 2019
29 °C

ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಲು ಮನವಿ

Published:
Updated:
Prajavani

ಕೋಲಾರ: ಮಾಲೂರು ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಹಲವು ಗಣಿ ಉದ್ದಿಮೆದಾರರು ಸರ್ಕಾರಿ ಜಮೀನು ಕಬಳಿಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ನಂಜುಂಡಸ್ವಾಮಿ ಬಣ) ಸದಸ್ಯರು ಇಲ್ಲಿ ಶನಿವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೇಂದ್ರ ವಲಯ ಎಸ್ಪಿ ಎ.ಆರ್‌.ಬಡಿಗೇರ್‌ ಅವರಿಗೆ ದೂರು ಸಲ್ಲಿಸಿದರು.

‘ಕಲ್ಲು ಗಣಿ ಮಾಲೀಕರು ನಕಲಿ ದಾಖಲೆಪತ್ರ ಸೃಷ್ಟಿಸಿ ಜಿಲ್ಲೆಯ ಮಾಲೂರು ತಾಲ್ಲೂಕಿನ ಹಲವೆಡೆ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ. ಗಣಿ ಪರವಾನಗಿ ಷರತ್ತು ಉಲ್ಲಂಘಿಸಿ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ತೆಗೆದು ಹೊರ ರಾಜ್ಯಗಳಿಗೆ ಸಾಗಿಸಿದ್ದಾರೆ’ ಎಂದು ಸದಸ್ಯರು ಆರೋಪಿಸಿದರು.

‘ಮಾಲೂರು ತಾಲ್ಲೂಕಿನ ವಿವಿಧೆಡೆ ಕ್ರಷರ್‌ ದಂಧೆಕೋರರಿಗೆ ಅಧಿಕಾರಿಗಳೇ ಸರ್ಕಾರಿ ಭೂಮಿಯ ನಕಲಿ ದಾಖಲೆಪತ್ರ ಸೃಷ್ಟಿಸಿ ಕೊಟ್ಟಿದ್ದಾರೆ. ಲಂಚದಾಸೆಗೆ ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟಿದ್ದಾರೆ. ಗಣಿ ಉದ್ಯಮಿಗಳು ಪರಿಸರ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮುಶಿವಣ್ಣ ದೂರಿದರು.

‘ಗಣಿ ಉದ್ಯಮಿಗಳು ಸರ್ಕಾರಕ್ಕೆ ರಾಜಧನ ಪಾವತಿಸದ ವಂಚಿಸಿದ್ದಾರೆ. ಗಣಿಗಾರಿಕೆ ಪ್ರದೇಶದ ಸುತ್ತಮುತ್ತಲ ರೈತರಿಗೆ ಸಮಸ್ಯೆಯಾಗುತ್ತಿದೆ. ಭಾರಿ ಗಾತ್ರದ ಟಿಪ್ಪರ್‌ಗಳ ಸಂಚಾರದಿಂದ ರಸ್ತೆಗಳು ಹಾಳಾಗುತ್ತಿವೆ. ಇತರ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಗಣಿ ಅಕ್ರಮದ ಬಗ್ಗೆ ಜಿಲ್ಲಾಡಳಿತದ ಬಳಿ ಮಾಹಿತಿಯಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಕಿಡಿಕಾರಿದರು.

ಒತ್ತುವರಿ ತೆರವುಗೊಳಿಸಿ: ‘ಸರ್ಕಾರಿ ಭೂಮಿಯ ಒತ್ತುವರಿ ತೆರವುಗೊಳಿಸಬೇಕು. ಒತ್ತುವರಿದಾರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಿ ಇಲಾಖಾ ತನಿಖೆಗೆ ಆದೇಶಿಸಬೇಕು. ಗಣಿ ಉದ್ಯಮಿಗಳು ಬಾಕಿ ಉಳಿಸಿಕೊಂಡಿರುವ ರಾಜಧನ ವಸೂಲು ಮಾಡಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಸದಸ್ಯರಾದ ಶಂಕರಪ್ಪ, ಶ್ರೀನಿವಾಸ್, ಗಂಗಾಧರ್, ಚಂದ್ರಪ್ಪ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !