ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಸೌಲಭ್ಯ ಶಿಕ್ಷಕರ ಮನವಿ

Last Updated 9 ಜುಲೈ 2021, 4:01 IST
ಅಕ್ಷರ ಗಾತ್ರ

ಮುಳಬಾಗಿಲು: ಶಿಕ್ಷಕರು ಗ್ರಾಮೀಣ ಭಾಗದ ಶಾಲೆಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೇ ಅನನುಕೂಲವಾಗಿದೆ. ಕೂಡಲೇ, ಬಸ್‌ ವ್ಯವಸ್ಥೆ ಮಾಡಿಕೊಡಬೇಕೆಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನಗರದ ಕೆಎಸ್‌ಆರ್‌ಟಿಸಿ ಡಿಪೊ ಮ್ಯಾನೇಜರ್ ದಯಾನಂದ್‌ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ಸಂಘದ ಅಧ್ಯಕ್ಷ ಎಚ್. ವೆಂಕಟಗಿರಿಯಪ್ಪ ಮಾತನಾಡಿ ಗಡಿ ಪ್ರದೇಶಗಳಾದ ಬ್ಯಾಡರಹಳ್ಳಿ, ಹೊನ್ನಿಕೆರೆ, ಸುಣ್ಣಪಕುಂಟೆ ನಾಚಹಳ್ಳಿ, ಪುಲಿಪಾಪೇನಹಳ್ಳಿ, ಅಂಕಿ ರೆಡ್ಡಿ ಹೊಸಹಳ್ಳಿ, ತಾತಿಗಟ್ಟ, ಅಂಬ್ಲಿಕಲ್, ಹೆಬ್ಬಣಿ ಕಡೆಗೆ ಶಿಕ್ಷಕಿ ಯರು ಹೋಗಿಬರಲು ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಹೇಳಿದರು.

ಮನವಿ ಸ್ವೀಕರಿಸಿದ ಡಿಪೊ ಮ್ಯಾನೇಜರ್ ದಯಾನಂದ್‌ ಮಾತ ನಾಡಿ, ಶಿಕ್ಷಣದಿಂದ ವಿದ್ಯಾರ್ಥಿಗಳು ಉತ್ತಮ ಮೌಲ್ಯ ರೂಪಿಸಿಕೊಳ್ಳಲು ಸಾಧ್ಯ. ಇಂತಹ ಸಂದರ್ಭದಲ್ಲಿ ಶಿಕ್ಷಕರು ತೆರಳಲು ಅನನುಕೂಲವಾಗಿರುವ ಮಾರ್ಗಗಳ ಬಗ್ಗೆ ನನಗೆ ಮಾಹಿತಿ ಕೊಟ್ಟರೆ ಕೂಡಲೇ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT